Home » Excise Department: ಕರ್ನಾಟಕದಲ್ಲಿ ನವೆಂಬರ್ 20 ರಂದು ಮದ್ಯ ಮಾರಾಟ ಬಂದ್‌!

Excise Department: ಕರ್ನಾಟಕದಲ್ಲಿ ನವೆಂಬರ್ 20 ರಂದು ಮದ್ಯ ಮಾರಾಟ ಬಂದ್‌!

841 comments
Alcohol

Excise Department: ಮದ್ಯದಂಗಡಿ ಮಾಲೀಕರು ನವೆಂಬರ್ 20 ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್‌ಗೆ ಕರೆ ನೀಡಿದ್ದಾರೆ. ಕರ್ನಾಟಕದ ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ವರ್ಗಾವಣೆ ಮತ್ತು ಪ್ರಮೋಷನ್‌ಗೆ ಲಂಚದ ವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ.

ಹೌದು, ಅಬಕಾರಿ ಇಲಾಖೆಯಲ್ಲಿ (Excise Department) ಮಿತಿಮೀರಿದ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಅಬಕಾರಿ ಅಧಿಕಾರಿಗಳ ವಿರುದ್ಧ ಮದ್ಯದಂಗಡಿ ಮಾಲೀಕರು ಸಮರಕ್ಕೆ ಮುಂದಾಗಿದ್ದು, ನವೆಂಬರ್ 20ರಂದು ಕರ್ನಾಟಕದಾದ್ಯಂತ ಮದ್ಯ ಮಾರಾಟ ಬಂದ್​ಗೆ ಕರೆ ನೀಡಲಾಗಿದೆ.

ಈ ಬಗ್ಗೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಜ್ಯ ವೈನ್ ಮರ್ಚೆಂಟ್​ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್​ ಹೆಗ್ಡೆ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 20ರಂದು ಕರ್ನಾಟಕದಾದ್ಯಂತ ಎಂಎಸ್​​ಐಎಲ್​ ಹೊರತುಪಡಿಸಿ ಎಲ್ಲಾ ಬಾರ್​ಗಳು ಬಂದ್​ಗೆ ಕರೆ ನೀಡಿರುವುದಾಗಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸಭೆ ಬಳಿಕ ಮದ್ಯ ಮಾರಾಟಗಾರರ ಸಂಘದ ಒಕ್ಕೂಟದ ಅಧ್ಯಕ್ಷ ಗುರುಸ್ವಾಮಿ ಪ್ರತಿಕ್ರಿಯಿಸಿದ್ದು, ಮದ್ಯ ಮಾರಾಟಗಾರರ ಸಂಘದ ಬೇಡಿಕೆ ತಿಳಿಸಿದ್ದೇವೆ. ಭ್ರಷ್ಟಾಚಾರದ ವಿಚಾರಗಳನ್ನೂ ಗಮನಕ್ಕೆ ತಂದಿದ್ದೇವೆ. ಹಣಕಾಸು ಇಲಾಖೆ ಸಿಎಸ್ ಜೊತೆಗೆ ಎಸಿಎಸ್ ಮಾತಾಡುವುದಾಗಿ ಹೇಳಿದ್ದಾರೆ. ಬಳಿಕ ಸಿಎಂ ಜೊತೆ ಸಭೆ ಮಾಡಿ ಸರ್ಕಾರ ತೀರ್ಮಾನ ಮಾಡಲಾಗುವುದು ಎಂದಿದ್ದಾರೆ.

You may also like

Leave a Comment