Home » Alvas: ಆಳ್ವಾಸ್ ಕಾಲೇಜಿನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ -ಡೆತ್ ನೋಟ್ ಪತ್ತೆ, ಪ್ರಕರಣ ದಾಖಲು!!

Alvas: ಆಳ್ವಾಸ್ ಕಾಲೇಜಿನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ -ಡೆತ್ ನೋಟ್ ಪತ್ತೆ, ಪ್ರಕರಣ ದಾಖಲು!!

3 comments

Alvas: ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಮೂಡಬಿದಿರೆಯ ಆಳ್ವಾಸ್(Alvas) ಕಾಲೇಜಿನಲ್ಲಿ ವಿದ್ಯಾರ್ಥಿ ಒಬ್ಬರು ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿದ್ಯಾರ್ಥಿ ವಸತಿ ನಿಲಯದ ನೇಣು ಹಾಕಿಕೊಂಡಿದ್ದಾರೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ಶಶಾಂಕ್(Shashank) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರು ಸಮೀಪದ ಹೊಸೂರು ನಿವಾಸಿ ಆಗಿದ್ದರು. ಪ್ರಸ್ತುತ ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ತೃತೀಯ ವರ್ಷದ ಬಿಬಿಎಂ ವಿದ್ಯಾಭ್ಯಾಸ ಮಾಡುತ್ತಿದ್ದರು.

ಶಶಾಂಕ್ ಕಾಲೇಜಿನ ಯಮುನಾ ಬಾಲಕರ ವಸತಿ ನಿಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್ ಬರೆದಿಟ್ಟಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಡೆತ್ ನೋಟನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮೃತದೇಹವನ್ನು ಮೂಡುಬಿದಿರೆ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ನಡೆಸಿ ಶುಕ್ರವಾರ ಬೆಳಗ್ಗೆ ಹೆತ್ತವರಿಗೆ ಹಸ್ತಾಂತರಿಸಲಾಗಿದೆ. ಈ ಕುರಿತು ಮೂಡುಬಿದರೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment