Home » Murder: ಹಾಡಹಗಲೇ ಯುವಕನಿಗೆ ಚಾಕು ಇರಿದು ಹತ್ಯೆ!

Murder: ಹಾಡಹಗಲೇ ಯುವಕನಿಗೆ ಚಾಕು ಇರಿದು ಹತ್ಯೆ!

2 comments

Murder: ಯುವಕನೊಬ್ಬನಿಗೆ ಹಾಡಹಗಲೇ ಚಾಕು ಇರಿದು ಬರ್ಬರವಾಗಿ ಹತ್ಯೆಗೈದ (Murder) ಘಟನೆ ಬೆಳಗಾವಿಯ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.

ಹತ್ಯೆಯಾದ ಯುವಕನನ್ನು ಸೋಹಿಲ್ ಅಹ್ಮದ್ ಕಿತ್ತೂರು (17) ಎಂದು ಗುರುತಿಸಲಾಗಿದ್ದು, ಈ ಯುವಕ ಗ್ರಾಮದಲ್ಲಿ ಎಗ್‌ರೈಸ್‌ ಅಂಗಡಿ ಇಟ್ಟುಕೊಂಡಿದ್ದ. ಆತನನ್ನು ಐವರು ಯುವಕರು ಹತ್ಯೆಗೈದಿದ್ದಾರೆ ಎಂದು ಶಂಕಿಸಲಾಗಿದೆ.

ಈಗಾಗಲೇ ಈತನಿಗೆ ಕೆಲವು ಯುವಕರಿಂದ ಕೊಲೆ ಬೆದರಿಕೆ ಬಂದಿತ್ತು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಮುರಗೋಡು ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

You may also like

Leave a Comment