Home » School Holiday: ಫೆಂಗಲ್‌ ಚಂಡಮಾರುತ; ಭಾರೀ ಮಳೆಯ ಸಂಭವ, ನಾಳೆ ಈ ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ ಘೋಷಣೆ

School Holiday: ಫೆಂಗಲ್‌ ಚಂಡಮಾರುತ; ಭಾರೀ ಮಳೆಯ ಸಂಭವ, ನಾಳೆ ಈ ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ ಘೋಷಣೆ

0 comments

School Holiday: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಫೆಂಗಲ್‌ ಚಂಡಮಾರುತದಿಂದ ರಾಜ್ಯದ ಮೇಲೆ ಭಾರೀ ಮಳೆ ಉಂಟಾಗಿದೆ. ಕರ್ನಾಟಕದಲ್ಲಿ ಕೆಲವು ಕಡೆ ಮಳೆ ಜೋರಾಗಿ ಬಂದಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕೆಲವೊಂದು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಶಾಲಾ-ಕಾಲೇಜಿಗೆ ರಜೆ ನೀಡುವ ನಿರ್ಧಾರ ಮಾಡಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ನಾಳೆ (ಮಂಗಳವಾರ) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ. ಫೆಂಗಲ್‌ ಚಂಡಮಾರುತದಿಂದ ಕೊಡಗಿನಲ್ಲಿ ಭಾರೀ ಮಳೆ ಮುಂದುವರಿದಿದೆ. ಕೊಡಗು ಜಿಲ್ಲೆಯಲ್ಲಿ ನಾಳೆ 8.30 (ಬೆಳಗ್ಗೆ) ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಆದೇಶ ಹೊರಡಿಸಿದ್ದಾರೆ.

ಕೇರಳದ ಕಾಸರಗೋಡು ಜಿಲ್ಲೆಯ ಎಲ್ಲ ವೃತ್ತಿ ಪರ ಕಾಲೇಜುಗಳ ಸಹಿತ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಡಿ.3 ರ ಮಂಗಳವಾರ ಜಿಲ್ಲಾಧಿಕಾರಿ ಇಂಪಶೇಖರ ರಜೆ ಘೋಷಣೆ ಮಾಡಿದ್ದಾರೆ. ಟ್ಯೂಷನ್‌ ಕೇಂದ್ರಗಳು, ಮದರಸಗಳಿಗೂ ರಜೆ ಇದೆ. ಮಾದರಿ ವಸತಿ ಶಾಲೆಗಳಿಗೆ ರಜೆ ಇಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

You may also like

Leave a Comment