6
SM Krishna: ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರು ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್ಎಂ ಕೃಷ್ಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸದಾಶಿವನಗರದ ಮನೆಯಲ್ಲಿ ನಿಧನ ಹೊಂದಿದ್ದಾರೆ.
ನಾಳೆ ಶಾಲಾ ಕಾಲೇಜುಗಳಿಗೆ ರಜೆ:
ನಾಳೆ ರಾಜ್ಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ಸರಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಈ ಅವಧಿಯಲ್ಲಿ ಯಾವುದೇ ಅಧಿಕೃತ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಡಿ. 10 ರಿಂದ ಡಿ.12 ರವರೆಗೆ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಬುಧವಾರ ಸಂಜೆ ಮದ್ದೂರಿನ ಸೋಮನಹಳ್ಳಿಯಲ್ಲಿ ಎಸ್ಎಂ ಕೃಷ್ಣ ಅಂತ್ಯಕ್ರಿಯೆ ನಡೆಯಲಿದೆ. ಇವರಿಗೆ ಇಷ್ಟವಾದ ಜಾಗದಲ್ಲಿ ಕಾಫಿಡೇ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
