Home » Mangaluru : ಕರಾವಳಿ ಉತ್ಸವ – ‘ನಗರ ದರ್ಶನ’ದ ಹೆಲಿಕ್ಯಾಪ್ಟರ್ ನಿಲ್ದಾಣ ಬದಲಾವಣೆ !!

Mangaluru : ಕರಾವಳಿ ಉತ್ಸವ – ‘ನಗರ ದರ್ಶನ’ದ ಹೆಲಿಕ್ಯಾಪ್ಟರ್ ನಿಲ್ದಾಣ ಬದಲಾವಣೆ !!

0 comments

Mangaluru : ಕರಾವಳಿ ಉತ್ಸವ ಪ್ರಯುಕ್ತ ಸಾವ೯ಜನಿಕರ ಆಕಷ೯ಣೆಗೆ ನಡೆಯುತ್ತಿರುವ ಹೆಲೆಕಾಪ್ಟರ್ ಸಂಚಾರದ ನಿಲ್ದಾಣವನ್ನು ಮೇರಿಹಿಲ್ ಹೆಲಿಪ್ಯಾಡ್ ನಿಂದ ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಹಾಗಿದ್ರೆ ಎಲ್ಲಿಗೆ?

ಹೌದು, ಕರಾವಳಿ ಉತ್ಸವ ಅಂಗವಾಗಿ ಸಾರ್ವಜನಿಕರ ಆಕಷ೯ಣೆಗೆ ನಡೆಯುತ್ತಿರುವ ಹೆಲೆಕಾಪ್ಟರ್ ಸಂಚಾರದ ನಿಲ್ದಾಣವನ್ನು ಮೇರಿಹಿಲ್ ಹೆಲಿಪ್ಯಾಡ್ ನಲ್ಲಿ ಆಯೋಜಿಸಲಾಗಿತ್ತು. ಆದರೆ ಈಗ ಈ ನಿಲ್ದಾಣವನ್ನು ಅಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮೈದಾನಕ್ಕೆ ಸ್ಥಳಾಂತರಿಸಲಾಗಿದೆ. ಕೆಲವೊಂದು ತಾಂತ್ರಿಕ ಕಾರಣಗಳಿಂದ ಇದನ್ನು ಅಡ್ಯಾರಿಗೆ ಸ್ಥಳಾಂತರಿಸಲಾಗಿದೆ.

ಅಂದಹಾಗೆ ಸಾರ್ವಜನಿಕರು ಹೆಲಿಕಾಪ್ಟರ್ ನಲ್ಲಿ ನಗರ ದರ್ಶನ ಮತ್ತು ಕಡಲ ಕಿನಾರೆಯ ಸೌಂದರ್ಯವನ್ನು ಆಕರ್ಷಕವಾಗಿ ವೀಕ್ಷಿಸಬಹುದಾಗಿದೆ. ಹೆಲಿಕಾಪ್ಟರ್ ಪ್ರಯಾಣದ ಪ್ರತಿ ಟ್ರಿಪ್‍ನಲ್ಲಿ 6 ಜನರಿಗೆ ಸಂಚರಿಸಲು ಅವಕಾಶವಿದ್ದು, ಹೆಲಿಕಾಫ್ಟರ್‍ ನಲ್ಲಿ ಸಂಚರಿಸಲು ಆಸಕ್ತರು ಬುಕ್ಕಿಂಗ್‍ಗಾಗಿ ವೆಬ್‍ಸೈಟ್ www.helitaxii.com ಸಂಪರ್ಕಿಸಬಹುದಾಗಿದೆ.

You may also like

Leave a Comment