Home » Bantwala: ಲಾರಿ ಮತ್ತು ಬೈಕ್ ನಡುವೆ ಅಪಘಾತ: ಮಗು ಸಾವು

Bantwala: ಲಾರಿ ಮತ್ತು ಬೈಕ್ ನಡುವೆ ಅಪಘಾತ: ಮಗು ಸಾವು

0 comments

Bantwala: (ಮಾಣಿ) ಈಚರ್ ಲಾರಿ ಹಾಗೂ ಬೈಕ್ ನಡುವೆ ಅಪಘಾತವೊಂದು ಸಂಭವಿಸಿದ್ದು,  ಈ ಅಪಘಾತದಲ್ಲಿ 6 ವರ್ಷದ ಮಗುವೊಂದು ಸಾವಿಗೀಡಾಗಿದೆ.

ಈ ಘಟನೆ ಶನಿವಾರ ಸಂಜೆ 6.30 ರ ವೇಳೆಗೆ ಸಂಭವಿಸಿದೆ.

ಈ ಘಟನೆಯಲ್ಲಿ ತಂದೆ-ತಾಯಿ ಸಹಿತ ನಾಲ್ಕು ಮಂದಿ ಗಾಯಗೊಂಡಿದ್ದಾರೆ.

ಮೃತ ಮಗುವನ್ನು ಬೆಳ್ತಂಗಡಿ ತಾಲೂಕಿನ ನಾವೂರು ಸಮೀಪದ ಮುರ ನಿವಾಸಿ ಅಬ್ದುಲ್ ಸಲೀಂ ಅವರ ಹಿರಿಯ ಪುತ್ರ ಶಾಝಿನ್ (6) ಎಂದು ಗುರುತಿಸಲಾಗಿದೆ.

ಸಲೀಂ ಅವರು ತನ್ನ ಪತ್ನಿ- ಮಕ್ಕಳೊಂದಿಗೆ ಬೈಕಿನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಗಡಿಯಾರ ಎಂಬಲ್ಲಿ ಈಚರ್ ಲಾರಿ ಡಿಕ್ಕಿ ಹೊಡೆದಿದೆ.

ಮಗು ಶಾಝಿನ್ ಸ್ಥಳದಲ್ಲೇ ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

ಗಾಯಗೊಂಡ ಅಬ್ದುಲ್ ಸಲೀಂ, ಅವರ ಪತ್ನಿ ಹಾಗೂ ಇನ್ನಿಬ್ಬರು ಮಕ್ಕಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

You may also like

Leave a Comment