South Korea Plane Crash: 175 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಮಾನವು ರನ್‌ವೇಯಿಂದ ಸ್ಕಿಡ್ ಆಗಿ ದಕ್ಷಿಣ ಕೊರಿಯಾದ ಮುವಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಗೋಡೆಗೆ ಡಿಕ್ಕಿ ಹೊಡೆದಿದೆ.
ವಿಮಾನ ಅಪಘಾತದಲ್ಲಿ ಸುಮಾರು 28 ಜನರು ಸಾವನ್ನಪ್ಪಿದ್ದಾರೆ.
ವಿಮಾನಕ್ಕೆ ಆಗಿರುವ ಅಪಾರ ಹಾನಿಯನ್ನು ಪರಿಗಣಿಸಿ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
ವರದಿಯ ಪ್ರಕಾರ, ಈ ಜೆಜು ಏರ್ ವಿಮಾನವು ಥೈಲ್ಯಾಂಡ್‌ನಿಂದ ಹಿಂತಿರುಗುತ್ತಿತ್ತು. ಲ್ಯಾಂಡಿಂಗ್ ವೇಳೆ ಈ ಅವಘಡ ಸಂಭವಿಸಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಮುವಾನ್ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದಕ್ಷಿಣ ಕೊರಿಯಾದ ಮುವಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಕಿಯನ್ನು ನಂದಿಸಲಾಗಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
ಮುವಾನ್ ವಿಮಾನ ನಿಲ್ದಾಣದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು ಇಬ್ಬರು ಜೀವಂತವಾಗಿ ಪತ್ತೆಯಾಗಿದ್ದಾರೆ. ವರದಿಯ ಪ್ರಕಾರ, ಪಕ್ಷಿಯ ಸಂಪರ್ಕದಿಂದಾಗಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
