Home » Dr G Parameshwar : ಲಕ್ಷ್ಮಿ ಹೆಬ್ಬಾಳ್ಕರ್- ಸಿಟಿ ರವಿ ಕೇಸ್ ಬಗ್ಗೆ ಹೊಸ ಅಪ್ಡೇಟ್ ನೀಡಿದ ಗೃಹ ಸಚಿವ ಪರಮೇಶ್ವರ್ !!

Dr G Parameshwar : ಲಕ್ಷ್ಮಿ ಹೆಬ್ಬಾಳ್ಕರ್- ಸಿಟಿ ರವಿ ಕೇಸ್ ಬಗ್ಗೆ ಹೊಸ ಅಪ್ಡೇಟ್ ನೀಡಿದ ಗೃಹ ಸಚಿವ ಪರಮೇಶ್ವರ್ !!

0 comments

Dr G Parameshwar : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅವಾಚ್ಯ ಶಬ್ದ ಬಳಸಿದ ಆರೋಪವನ್ನು ಎಂಎಲ್‌ಲಿ ಸಿಟಿ ರವಿ ಅವರು ಎದುರಿಸುತ್ತಿದ್ದಾರೆ. ಸಿಟಿ ರವಿ ಅವರು ಅವಾಚ್ಯ ಶಬ್ದ ಬಳಸಿದ್ದಾರೆ ಎನ್ನುವುದಕ್ಕೆ ಸಂಬಂಧಿಸಿದಂತೆ ಈಗಾಗಲೇ ದೂರು ದಾಖಲಾಗಿದ್ದು ತನಿಖೆ ನಡೆದಿದೆ. ಇದು ರಾಜ್ಯಾದ್ಯಂತ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟು ಹಾಕಿದೆ. ಇದೀಗ ಈ ಕೇಸ್‌ನಲ್ಲಿನ ಹೊಸ ಅಪ್‌ಡೇಟ್‌ ಬಗ್ಗೆ ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್(Dr G Parameshwar)ಅವರು ಮಾತನಾಡಿದ್ದಾರೆ.

ಹೌದು, ಈ ಪ್ರಕರಣ ಇದೀಗ ರಾಜ್ಯದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಸಿಟಿ ರವಿ ಅವರು ಸಹ ಈ ಸಂಬಂಧ ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ರಾಜ್ಯಪಾಲರಿಗೂ ಸಿಟಿ ರವಿ ಮನವಿ ಸಲ್ಲಿಸಿದ್ದಾರೆ. ಈ ರೀತಿ ಇರುವಾಗಲೇ ಗೃಹ ಸಚಿವ ಜಿ. ಪರಮೇಶ್ವರ್ ಅವರು ಮಾತನಾಡಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಮೇಲೆ ಶಾಸಕ ಸಿ.ಟಿ.ರವಿ ಅವಾಚ್ಯ ಪದ ಬಳಕೆ ಮಾಡಿರುವ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತಮ್ಮ‌ ಕೆಲಸವನ್ನು ಪ್ರಾರಂಭಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಮೂಲಕ ತನಿಖೆ ಪ್ರಗತಿಯಲ್ಲಿದೆ ಹಾಗೂ ತನಿಖೆ ಚುರುಕುಗೊಳಿಸಲಾಗಿದೆ ಎನ್ನುವ ಸುಳಿವನ್ನು ಅವರು ಕೊಟ್ಟಿದ್ದಾರೆ.

You may also like

Leave a Comment