Home » Mangalore: ಆಟವಾಡುತ್ತಿದ್ದಾಗ ಕುಸಿದು ಬಿದ್ದು ವಿದ್ಯಾರ್ಥಿ ಸಾವು

Mangalore: ಆಟವಾಡುತ್ತಿದ್ದಾಗ ಕುಸಿದು ಬಿದ್ದು ವಿದ್ಯಾರ್ಥಿ ಸಾವು

0 comments

Mangalore: ಅಲೋಶಿಯಸ್‌ ಕಾಲೇಜಿನ ಪದವಿ ವಿದ್ಯಾರ್ಥಿಯೋರ್ವ ಗೆಳೆಯರ ಜೊತೆ ಶಟ್ಲ್‌ ಆಟವಾಡುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆಯೊಂದು ಫಳ್ನೀರ್‌ನಲ್ಲಿ ಬುಧವಾರ (ಜ.15) ನಡೆದಿದೆ.

ಅಡ್ಡೂರಿನ ನಿವಾಸಿಯಾಗಿದ್ದು, ಪ್ರಸ್ತುತ ಅತ್ತಾವರ ಐವರಿ ಟವರ್‌ನಲ್ಲಿ ವಾಸಿಸುತ್ತಿದ್ದ ಶರೀಫ್‌ ಅವರ ಪುತ್ರ ಶಹೀಮ್‌ (20) ಎಂಬುವವನೇ ಮೃತ ಯುವಕ.

ಕುಸಿದು ಬಿದ್ದ ಯುವಕನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಿ ಮೃತ ಹೊಂದಿದ್ದಾಗಿ ವೈದ್ಯರು ಘೋಷಣೆ ಮಾಡಿದ್ದಾರೆ.

You may also like