Home » Nitish Kumar: ಬಿಜೆಪಿಗೆ ಊಹಿಸದಂತ ಶಾಕ್ – ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದ ನಿತೀಶ್ ಕುಮಾರ್ !!

Nitish Kumar: ಬಿಜೆಪಿಗೆ ಊಹಿಸದಂತ ಶಾಕ್ – ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದ ನಿತೀಶ್ ಕುಮಾರ್ !!

0 comments

Nitish Kumar: ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷವು ಬಿಜೆಪಿ ಸರ್ಕಾರಕ್ಕೆ ನೀಡಿದ ತನ್ನ ಬೆಂಬಲವನ್ನು ಹಿಂಪಡೆದುಕೊಂಡು ದೊಡ್ಡ ಆಘಾತವನ್ನು ನೀಡಿದೆ. ಹಾಗಂತ ನಿತೀಶ್ ಕುಮಾರ್( Nitish Kumar) ವಾಪಸ್ಸು ಪಡೆದದ್ದು ಕೇಂದ್ರ ಸರ್ಕಾರಕ್ಕೆ ನೀಡಿದ ಬೆಂಬಲವನ್ನಲ್ಲ . ಬದಲಿಗೆ ಮಣಿಪುರದ ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟದ ರಾಜ್ಯ ಸರ್ಕಾರಕ್ಕೆ ನೀಡಿದ ಬೆಂಬಲವನ್ನು ಹಿಂಪಡೆದಿದ್ದಾರೆ.

ಹೌದು, ಮಣಿಪುರದಲ್ಲಿ ಎನ್. ಬಿರೇನ್ ಸಿಂಗ್ ನೇತೃತ್ವದ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಬುಧವಾರ ಔಪಚಾರಿಕವಾಗಿ ಹಿಂತೆಗೆದುಕೊಂಡಿದೆ ಎಂಬುದಾಗಿ ತಿಳಿದು ಬಂದಿದೆ. ಈ ಮೂಲಕ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ನೀಡಿದ್ದ ತನ್ನ ಬೆಂಬಲವನ್ನು ವಾಪಸ್ ಪಡೆದುಕೊಂಡಿದೆ

ಈ ಕುರಿತಾಗಿ ಮಣಿಪುರ ಪಕ್ಷದ ಘಟಕದ ಅಧ್ಯಕ್ಷ ಕ್ಷೇತ್ರಮಯಮ್ ಬಿರೇನ್ ಸಿಂಗ್ ‘ಜೆಡಿಯು ಇನ್ನು ಮುಂದೆ ಮಣಿಪುರದಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವನ್ನು ಬೆಂಬಲಿಸುವುದಿಲ್ಲ’ ಎಂದು ಅಧಿಕೃತ ಪತ್ರದಲ್ಲಿ ಘೋಷಿಸಿದ್ದಾರೆ.

ಅಂದಹಾಗೆ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷದ ಈ ನಡೆಯ ಹೊರತಾಗಿಯೂ, ಮಣಿಪುರದಲ್ಲಿ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರದ ಸ್ಥಿರತೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಯಾಕೆಂದರೆ ಮಣಿಪುರ ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿ ಪ್ರಬಲ ಬಹುಮತವನ್ನು ಹೊಂದಿದ್ದು, ಯಾವುದೇ ಪಕ್ಷದ ಹಸ್ತಕ್ಷೇಪವಿಲ್ಲದೆ ಅಧಿಕಾರದಲ್ಲಿ ಮುಂದುವರಿಯಬಹುದು.

ಇನ್ನು ಮಣಿಪುರದಲ್ಲಿ 2022ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಯು ಆರು ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ ನಂತರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಜೆಡಿಯುನ ಐವರು ಶಾಸಕರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. 60 ಸದಸ್ಯ ಬಲದ ಮಣಿಪುರ ವಿಧಾನಸಭೆಯಲ್ಲಿ ಸದ್ಯ ಬಿಜೆಪಿ 37 ಶಾಸಕರನ್ನು ಹೊಂದಿದೆ. ನಾಗಾ ಪೀಪಲ್ಸ್ ಫ್ರಂಟ್‌ನ ಐವರು ಶಾಸಕರು ಮತ್ತು ಮೂವರು ಪಕ್ಷೇತರರು ಸರ್ಕಾರಕ್ಕೆ ಬೆಂಬಲ ನೀಡಿದ್ದು, ಜೆಡಿಯು ಬೆಂಬಲ ಹಿಂಪಡೆದಿರುವುದರಿಂದ ಬಹುಮತದ ಮೇಲೆ ಪರಿಣಾಮ ಬೀರದು ಎಂದು ತಿಳಿದು ಬಂದಿದೆ.

You may also like