5
Neha Murder case: ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣ ಸಂಬಂಧಿಸಿದಂತೆ ಕೊಲೆ ಆರೋಪಿ ಫಯಾಜ್ ನನ್ನು ಕಾಲೇಜಿನಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
2024 ರ ಏ.18ರಂದು ನೇಹಾಳನ್ನು ಕಾಲೇಜಿನ ಆವರಣದಲ್ಲೇ ಹಂತಕ ಫೈಯಾಜ್ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ್ದ. ಈ ಘಟನೆ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೂ ಕಾರಣವಾಗಿತ್ತು. ಈ ಕುರಿತು (Neha Murder case) ಶ್ರೀ ರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲೀಕ್ ಹೋರಾಟ ಮಾಡಿದ್ದರು. ಇದೀಗ ಕೊಲೆ ಆರೋಪಿ ವಿದ್ಯಾರ್ಥಿ ಫಯಾಜ್ ಅಮಾನತು ಮಾಡಿಸಿ ಅಮಾನತು ಪತ್ರ ಪಡೆದುಕೊಂಡಿದ್ದಾರೆ.
ಸದ್ಯ ಪಿಸಿ ಜಾಬಿನ್ ಕಾಲೇಜ್ನಲ್ಲಿ ಫಯಾಜ್ 2022ರಲ್ಲಿ BCA ವ್ಯಾಸಂಗ ಮಾಡುತಿದ್ದ. 5 ಮತ್ತು 6ನೇ ಸೆಮಿಸ್ಟರ್ನಲ್ಲಿ ಕೆಲ ವಿಷಯಗಳಲ್ಲಿ ಫೇಲ್ ಕೂಡ ಆಗಿದ್ದ. ಇನ್ಮುಂದೆ ಫಯಾಜ್ ಕಾಲೇಜ್ಗೆ ಬರಲು ಬಿಡಲ್ಲ ಎಂದು ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.
