4
Bengaluru: ಕಳೆದ 5 ದಿನಗಳಿಂದ ಸಾವಿರಾರು ಅಂಗನವಾಡಿ ನೌಕರರು ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನ (Bengaluru) ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸಿದ್ದ ಅನಿರ್ದಿಷ್ಟಾವಧಿ ಮುಷ್ಕರ ಕೈಬಿಟ್ಟಿದ್ದಾರೆ. ಜೊತೆಗೆ ಅಂಗನವಾಡಿ ನೌಕರರು ತಮ್ಮ ಬೇಡಿಕೆ ಈಡೇರಿಕೆಗೆ ಮಾ.7 ರವರೆಗೆ ಗಡುವು ಕೊಟ್ಟು ಪ್ರತಿಭಟನೆ ಹಿಂಪಡೆಯಲಾಗಿದೆ.
ಮಾ-7ರ ಒಳಗಾಗಿ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಮೊನ್ನೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೋಟಿಸ್ ಕೊಟ್ಟರೂ ಪ್ರತಿಭಟನೆ ನಿಲ್ಲಿಸಿರಲಿಲ್ಲ. ಸರ್ಕಾರಕ್ಕೆ ಚಾಲೆಂಜ್ ಹಾಕಿ ಪ್ರತಿಭಟನೆ ನಡೆಸಲಾಗಿತ್ತು. ಈಗ ಅಂತಿಮವಾಗಿ ಗಡುವು ಕೊಟ್ಟು ಪ್ರತಿಭಟನೆ ಕೈ ಬಿಡಲಾಗಿದೆ.
