3
Aranthodu: ಅರಂತೋಡು ಎಂಬಲ್ಲಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ರೆ ಪಡೆಯುತ್ತಿದ್ದ ಬೈಕ್ ಸವಾರ ಮ್ರತಪಟ್ಟ ಘಟನೆ ಭಾನುವಾರ ವರದಿಯಾಗಿದೆ.
ಮ್ರತಪಟ್ಟ ಬೈಕ್ ಸವಾರನನ್ನು ಕರ್ನಾಟಕ ಪೊಲೀಸ್ ಸಿಬ್ಬಂದಿ ಹರೀಶ್ ಎಂದು ಗುರುತಿಸಲಾಗಿದೆ.
ಹರೀಶ್ ಅವರು ಮಂಗಳೂರಿನ ಕಂಕನಾಡಿ ಪೊಲೀಸ್ ಸ್ಟೇಷನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಮೂಲತಃ ಕೆಆರ್ ನಗರ ತಾಲೂಕು ಮೈಸೂರು ಜಿಲ್ಲೆಯ ಗಾಯನ ಹಳ್ಳಿ ಗ್ರಾಮದ ನಿವಾಸಿಯಾಗಿದ್ದರು.ಅವರು ತಮ್ಮ ಊರಿನಿಂದ ಮಂಗಳೂರಿಗೆ ಬುಲೆಟ್ ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿಹೊಡೆದು ಪರಾರಿಯಾಗಿತ್ತು ಎಂದು ಹೇಳಲಾಗುತ್ತಿದೆ.ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
