Home » IPL 2025 RCB Captain: ಆರ್‌ಸಿಬಿ ತಂಡಕ್ಕೆ ಹೊಸ ನಾಯಕ ಆಯ್ಕೆ

IPL 2025 RCB Captain: ಆರ್‌ಸಿಬಿ ತಂಡಕ್ಕೆ ಹೊಸ ನಾಯಕ ಆಯ್ಕೆ

0 comments

Bangalore: ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಕೂಟ ಆರಂಭವಾಗಲಿದ್ದು, ಎಲ್ಲಾ ಫ್ರಾಂಚೈಸಿಗಳು ಸಿದ್ಧತೆಯಲ್ಲಿ ತೊಡಗಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ಇನ್ನೂ ತಮ್ಮ ನಾಯಕನ ಆಯ್ಕೆ ಘೋಷಣೆ ಮಾಡಿಲ್ಲ. ಇದೀಗ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ನೂತನ ಸೀಸನ್‌ಗೆ ತಮ್ಮ ನಾಯಕನ ಘೊಷಣೆಯನ್ನು ಮಾಡಿದೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು 2025 ರ ಸೀಸನ್‌ಗೆ ರಜತ್‌ ಪಾಟಿದಾರ್‌ ನಾಯಕನಾಗಿ ಆಯ್ಕೆಯಾಗಿದ್ದಾರೆ. ಮಧ್ಯಪ್ರದೇಶ ಮೂಲದ ರಜತ್‌ ಪಾಟೀದಾರ್‌ ಕಳೆದ ಕೆಲವು ಸೀಸನ್‌ಗಳಲ್ಲಿ ಆರ್‌ಸಿಬಿ ಪರ ಆಡಿದ್ದಾರೆ. 31 ವರ್ಷದ ಪಾಟಿದಾರ್‌ ಇದೀಗ ಆರ್‌ಸಿಬಿ ನಾಯಕ.

https://twitter.com/RCBTweets/status/1889930275993633152

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್​ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ.

You may also like