Gruhalakshmi : ರಾಜ್ಯ ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆ ಪ್ರಮುಖವಾದದ್ದು. ಇದೀಗ ಗೃಹಲಕ್ಷ್ಮಿ ಹಣ ಬಿಡುಗಡೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.
ಹೌದು, ಮೊದಲು ಜಿಲ್ಲಾ ಉಪನಿರ್ದೇಶಕರ ಮೂಲಕ ಬಿಡುಗಡೆಯಾಗುತ್ತಿದ್ದ ಗೃಹಲಕ್ಷ್ಮಿ ಹಣವನ್ನು ತಾಲೂಕು ಪಂಚಾಯಿತಿ ಮೂಲಕ ಬಿಡುಗಡೆ ಮಾಡುವ ತೀರ್ಮಾನ ಕೈಗೊಳ್ಳಲಾಗುತ್ತಿತ್ತು. ಆದರೆ ಹಣ ಬಿಡುಗಡೆಯಲ್ಲಿ ವಿಳಂಬವಾಗುತ್ತಿದ್ದು, ಮತ್ತೆ ಹಳೆ ವಿಧಾನದಂತೆ ಜಿಲ್ಲಾ ಉಪ ನಿರ್ದೇಶಕರ ಮೂಲಕವೇ ಹಣ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ.
ಈ ಕುರಿತು ಮಾತನಾಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ‘ತಾಲ್ಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದ್ದು, ಉಪ ನಿರ್ದೇಶಕರ ಮೂಲಕ ಹಣ ಹಾಕಲಾಗುತ್ತಿದೆ. ಯೋಜನೆಗೆ ಹಣ ಫಲಾನುಭವಿಗಳ ಖಾತೆಗಳಿಗೆ ಜಮಾ ಆಗಿಲ್ಲ. ಈ ಸಂಬಂಧ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ್ದು, ಶೀಘ್ರದಲ್ಲೇ ಹಣ ಜಮಾ ಮಾಡಲು ಸೂಚನೆ ನೀಡಲಾಗಿದೆ’ ಎಂದು ಮಾಹಿತಿ ನೀಡಿದರು.
