Home » Belthangady : ಬೆಳ್ತಂಗಡಿ ಯುವಕ ಮೈಸೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ!!

Belthangady : ಬೆಳ್ತಂಗಡಿ ಯುವಕ ಮೈಸೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ!!

0 comments

Belthangady : ಬೆಳ್ತಂಗಡಿಯ ನವ ವಿವಾಹಿತರು ಒಬ್ಬರು ಮೈಸೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಂತಹ ಘಟನೆ ಬೆಳಕಿಗೆ ಬಂದಿದೆ.

ಹೌದು, ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾ.ಪಂ ವ್ಯಾಪ್ತಿಯ ನಾಲ್ಕೂರು ಗ್ರಾಮದ ಮಜಲಡ್ಡ ನಿವಾಸಿಯಾಗಿರುವ ಕರಿಯ ಪೂಜಾರಿಯವರ ಪುತ್ರ ಕಿರಣ್‌ ಅವರು ಕಳೆದ 12 ವರ್ಷಗಳಿಂದ ಮೈಸೂರಿನ ಖಾಸಾಗಿ ಕಂಪನಿಯೊಂದರಲ್ಲಿ ಟೆಕ್ನಿಕಲ್‌ ಆಫೀಸರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಕಳೆದ ಮೂರೂವರೆ ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಅದರೀಗ ಕಿರಣ್‌ (35) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.13 ರಂದು ಮೈಸೂರಿನಲ್ಲಿ ನಡೆದಿದೆ.

ಇನ್ನೂ ಅವರು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಯುವಶಕ್ತಿ ಫ್ರೆಂಡ್ಸ್‌ ಇದರ ಸದಸ್ಯರಾಗಿದ್ದರು. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೊಲೀಸ್‌ ತನಿಖೆಯಿಂದ ತಿಳಿದು ಬರಬೇಕಾಗಿದೆ.ಈ ಸಂಭಂಧ ಮೈಸೂರು ವಿದ್ಯಾರಣ್ಯಪುರಂ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲಾಗಿದೆ.

You may also like