7
Delhi: ಭಾರಿ ಕುತೂಹಲ ಮೂಡಿಸಿದ ದೆಹಲಿ ಸಿಎಂ ಯಾರೆಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ದೆಹಲಿ ಮುಖ್ಯಂತ್ರಿ ಹುದ್ದೆಗೆ ಬಿಜೆಪಿಯು ಶಾಸಕಿ ರೇಖಾಗುಪ್ತ ಅವರ ಹೆಸರನ್ನ ಅಂತಿಮಗೊಳಿಸಲಾಗಿದೆ.
ಮೂಲಗಳ ಪ್ರಕಾರ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್) ರೇಖಾಗುಪ್ತ ಅವರ ಹೆಸರನ್ನು ಸೂಚಿಸಲಾಗಿದ್ದು, ಇದಕ್ಕೆ ಬಿಜೆಪಿ ಕೂಡ ಒಪ್ಪಿದೆ. ಇನ್ನು ರೇಖಾ ಅವರು ಫೆ.20 ಅಂದರೆ ನಾಳೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ವರದಿಯಾಗಿದೆ.
ಮುಖ್ಯಮಂತ್ರಿಯವರ ಪ್ರಮಾಣ ವಚನ ಸ್ವೀಕಾರ ಗುರುವಾರ (ಫೆ.20) ಮಧ್ಯಾಹ್ನ 12:35 ಕ್ಕೆ ರಾಮಲೀಲಾ ಮೈದಾನದಲ್ಲಿ ನಡೆಯಲಿದೆ. ದೆಹಲಿಯ ಮುಖ್ಯ ಕಾರ್ಯದರ್ಶಿ ಕಳುಹಿಸಿರುವ ಆಹ್ವಾನ ಪತ್ರಿಕೆಯಲ್ಲಿ, ಮುಖ್ಯಮಂತ್ರಿಯೊಂದಿಗೆ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಉಲ್ಲೇಖವೂ ಇದೆ ಎಂದು ವರದಿಗಳು ಉಲ್ಲೇಖಿಸಿವೆ.
