Home » Belthangady : 7ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ !!

Belthangady : 7ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ !!

0 comments

Belthangady : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ 7ನೇ ತರಗತಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.

ತಣ್ಣೀರುಪಂತ ನಿವಾಸಿ ಡೊಂಬಯ್ಯ ಗೌಡ ಎಂಬವರ ಪುತ್ರ ಶ್ರವಣ್ (13) ಮೃತ ವಿದ್ಯಾರ್ಥಿ.ಈತ ಉಪ್ಪಿನಂಗಡಿಯ ಖಾಸಗಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಯಾಗಿದ್ದು ಮನೆಯ ಕೋಣೆಯಲ್ಲಿ ಫೆಬ್ರವರಿ 18ರಂದು ರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನೆಗೆ ಕಾರಣ ಏನು ಎಂದು ತಿಳಿದು ಬಂದಿಲ್ಲ. ಸದ್ಯ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like