2
New Delhi: ಮಹಾಕುಂಭ ಮೇಳದ ತ್ರಿವೇಣಿ ಸಂಗಮದ ನೀರಿನ ಶುದ್ಧತೆ ಕುರಿತು ಪದ್ಮಶ್ರೀ ಪುರಸ್ಕೃತ ವಿಜ್ಞಾನಿ ಡಾ.ಅಜಯ್ ಸೋಂಕರ್ ಪ್ರತಿಕ್ರಿಯೆ ನೀಡಿದ್ದಾರೆ. ” ಗಂಗಾ ನೀರು ಸ್ನಾನಕ್ಕೆ ಸುರಕ್ಷಿತ ಮಾತ್ರವಲ್ಲ. ಅದರ ಸಂಪರ್ಕಕ್ಕೆ ಬರುವುದರಿಂದ ಚರ್ಮ ರೋಗಗಳು ಕೂಡಾ ಬರುವುದಿಲ್ಲ” ಎಂದು ಹೇಳಿದ್ದಾರೆ.

ಐದು ಘಾಟ್‌ಗಳಿಂದ ಗಂಗಾ ನೀರಿನ ಮಾದರಿಗಳನ್ನು ತೆಗೆದುಕೊಂಡು ಪ್ರಯೋಗಾಲಯದಲ್ಲಿ ಸೂಕ್ಷ್ಮ ಪರೀಕ್ಷೆ ಮಾಡಲಾಗಿದೆ. ನೀರಿನ pH ಮಟ್ಟದಲ್ಲಿ ಯಾವುದೇ ಇಳಿಕೆ ಕಂಡು ಬಂದಿಲ್ಲ. ಬ್ಯಾಕ್ಟೀರಿಯಾ ಬೆಳವಣಿಗೆ ಕೂಡಾ ಕಂಡು ಬಂದಿಲ್ಲ. ಗಂಗ ನೀರಿನಲ್ಲಿ 1100 ವಿಧದ ಬ್ಯಾಕ್ರೀರಿಯೋಫೇಜ್‌ಗಳು ಇರುವುದ ಕಂಡು ಬಂದಿದೆ. ಇದು ಹಾನಿಕಾರಿಕ ಬ್ಯಾಕ್ಟೀರಿಯಾವನ್ನು ನಾಶಪಡಿಸುತ್ತದೆ. ಇದರಿಂದ ಕಲುಷಿತವಾಗುವುದಿಲ್ಲ ಎಂದು ಹೇಳಿದ್ದಾರೆ.
