Home » Sullia: ಸುಳ್ಯ: ಫೆ. 28 ರಂದು ಸುಳ್ಯದಲ್ಲಿ ಮಾಸ್ ಶಾಖೆಯ ಅಡಿಕೆ ” ಸಂಸ್ಕರಣಾ ಘಟಕದ ಉದ್ಘಾಟನೆ

Sullia: ಸುಳ್ಯ: ಫೆ. 28 ರಂದು ಸುಳ್ಯದಲ್ಲಿ ಮಾಸ್ ಶಾಖೆಯ ಅಡಿಕೆ ” ಸಂಸ್ಕರಣಾ ಘಟಕದ ಉದ್ಘಾಟನೆ

by ಕಾವ್ಯ ವಾಣಿ
0 comments

Sullia: ಮಾಸ್ ಲಿಮಿಟೆಡ್ ಸಂಸ್ಥೆಯ ಅಧ್ಯಕ್ಷ ಸವಣೂರು ಸೀತಾರಾಮ ರೈ ಯವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾಸ್ ಲಿಮಿಟೆಡ್ ಸಂಸ್ಥೆಯ ಸುಳ್ಯ (Sullia) ಶಾಖೆಯ ಅಡಿಕೆ ಸಂಸ್ಕರಣಾ ಘಟಕವು ಫೆ. 28 ರಂದು ಸುಳ್ಯದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಸಹಕಾರ ರತ್ನ ದಿ. ವಾರಣಾಶಿ ಸುಬ್ರಾಯ ಭಟ್‌ರವರ ಪ್ರಯತ್ನ ಹಾಗೂ ಸಹಕಾರ ರತ್ನ ಎಂ.ಎನ್‌. ರಾಜೇಂದ್ರಕುಮಾ‌ರ್ ಇವರ ಪ್ರೋತ್ಸಾಹದೊಂದಿಗೆ ಪ್ರಾರಂಭಗೊಂಡ ಮಾಸ್ ಸಂಸ್ಥೆ ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಡಿಕೆ ಕೃಷಿಕರ ಹಿತ ಸಂರಕ್ಷಿಸುವ ಸಲುವಾಗಿ ಕಾರ್ಯನಿರ್ವಹಿಸುತ್ತಾ ಬಂದಿದೆ. ಈಗಾಗಲೇ ಜುಲೈ 2024ರಲ್ಲಿ ಕಾವು ಶಾಖೆಯನ್ನು ಹಾಗೂ ನವೆಂಬರ್ 2024ರಲ್ಲಿ ನಿಂತಿಕಲ್ಲು ಶಾಖೆಯನ್ನು ತೆರೆಯಲಾಗಿದೆ. ಅಲ್ಲದೇ ಕಳೆದ ಹತ್ತು ತಿಂಗಳ ಅವಧಿಯಲ್ಲಿ ಸಂಸ್ಥೆಯ ವಹಿವಾಟು ಶೇಖಡ 40ರಷ್ಟು ವೃದ್ಧಿಯಾಗಿದೆ ಎಂದರು.

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಲಿದ್ದು ಸಹಕಾರ ಯೂನಿಯನ್ ಅಧ್ಯಕ್ಷ ಹಾಗೂ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಶಶಿಕುಮಾ‌ರ್ ರೈ ಬಾಲ್ಯೂಟ್ಟು, ಡಿಸಿಸಿ ಬ್ಯಾಂಕ್‌ ಎಸ್‌. ಎನ್. ಮನ್ಮಥ, ಎಪಿಎಂಸಿ ಮಾಜಿ ಅಧ್ಯಕ್ಷ ಎನ್‌. ಜಯಪ್ರಕಾಶ್ ರೈ, ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಹೇಳಿದರು.

You may also like