Home » Chikkamagaluru: ಬೆಂಕಿ ಅವಘಡ; ಮನೆ ಸುಟ್ಟು ಭಸ್ಮ

Chikkamagaluru: ಬೆಂಕಿ ಅವಘಡ; ಮನೆ ಸುಟ್ಟು ಭಸ್ಮ

0 comments

Chikkamagaluru: ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡವೊಂದು ಸಂಭವಿಸಿದ್ದು, ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಮೂಡಿಗೆರೆ ತಾಲೂಕು ಮಾಳಿಗನಾಡು ಗ್ರಾಮದಲ್ಲಿರುವ ಸುನೀಲ್‌ ಎಂಬುವವರ ಮನೆಯಲ್ಲಿ ಈ ಅವಘಡ ನಡೆದಿದ್ದು, ರೇಖಾ (36) ಎಂಬುವವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗೃಹಪಯೋಗಿ ವಸ್ತುಗಳು ಬೆಂಕಿಗಾಹುತಿ ಆಗಿದೆ. ಹತ್ತಾರು ಮೂಟೆ ಕಾಫಿ ಬೀಜಗಳು ಸುಟ್ಟು ಹೋಗಿದೆ. ಅಡುಗೆ ಮಾಡುವ ಸಮಯದಲ್ಲಿ ಸ್ಟವ್‌ ಹಚ್ಚುವಾಗಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಕೆಲಸದಲ್ಲಿ ಯಶಸ್ವಿಯಾಗಿದ್ದಾರೆ.

ಬಾಳೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ದಾಖಲಾಗಿದೆ.

You may also like