Mahashivaratri: ಹಿಂದೂ ಉದ್ಯೋಗಿಗಳಿಗೆ ಶಿವರಾತ್ರಿ ಜಾಗರಣೆ ಹಿನ್ನೆಲೆಯಲ್ಲಿ ಮರುದಿನ ರಜೆ ನೀಡುವಂತೆ ರಾಜ್ಯ ಸರಕಾರಕ್ಕೆ ಹಿಂದೂ ಸಂಘಟನೆಗಳು ಮುಖಂಡರು ಮನವಿ ಮಾಡಿದ್ದಾರೆ.
ಮುಸ್ಲಿಂ ಮುಖಂಡರು ಮುಖ್ಯಮಂತ್ರಿಗಳಿಗೆ ರಂಜಾನ್‌ಗಾಗಿ ಪ್ರತಿದಿನ ಒಂದು ಗಂಟೆ ಮುಂಚಿತವಾಗಿ ಕಚೇರಿಯಿಂದ ಮನೆಗೆ ತೆರಳಲು ಅನುಮತಿ ನೀಡುವಂತೆ ಕೋರಿ ಪತ್ರ ಬರೆದಿದ್ದರು. ಇದೀಗ ಹಿಂದೂ ಮುಖಂಡರು ಕೂಡಾ ರಜೆ ನೀಡಿ ಎಂದು ಮನವಿ ಮಾಡಿದ್ದಾರೆ.
ಶಿವರಾತ್ರಿಯಂದು ಜಾಗರಣೆ ಇರುವುದರಿಂದ ಮರುದಿನ ಕಚೇರಿಗಳಿಗೆ ತೆರಳಿ ಕೆಲಸ-ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸಮಸ್ಯೆಯಾಗುವುದರಿಂದ ಶಿವರಾತ್ರಿ ಮರುದಿನ ಕೂಡಾ ಪೂಜಾ ಕೈಂಕರ್ಯಗಳು ಇರುತ್ತದೆ. ಹೀಗಾಗಿ ರಜೆ ನೀಡಲು ಹಿಂದೂ ಸಂಘಟನೆಗಳು ಒತ್ತಾಯ ಮಾಡಿದೆ.
ಪ್ರತಿ ವರ್ಷ ರಜೆ ಕೊಡುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಬೇಕು ಎಂದು ಮನವಿ ಮಾಡಿದೆ.
ತೆಲಂಗಾಣ, ಆಂಧ್ರಪ್ರದೇಶ ಸರಕಾರ ಈಗಾಗಲೇ ಮುಸ್ಲಿಂ ಉದ್ಯೋಗಿಗಳು ಒಂದು ಗಂಟೆ ಬೇಗನೆ ಮನೆಗೆ ಹೋಗಲು ಅನುಮತಿ ನೀಡಿದೆ. ಕರ್ನಾಟಕದಲ್ಲಿಯೂ ವಿನಾಯಿತಿ ನೀಡಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಎ ಆರ್ ಎಂ ಹುಸೇನ್, ಸೈಅದ್ ಅಹ್ಮದ್ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.
