4
Andhrapradesh: ದೇವಸ್ಥಾನಕ್ಕೆಂದು ಹೋಗುತ್ತಿದ್ದ 30ಕ್ಕೂ ಅಧಿಕ ಭಕ್ತರ ಮೇಲೆ ಆನೆಗಳ ಹಿಂಡು ದಾಳಿ ಮಾಡಿದ್ದು, ಮೂವರು ಸಾವಿಗೀಡಾಗಿರುವ ಘಟನೆ ನಡೆದಿದೆ. ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಕಾಡಿನಲ್ಲಿ ಮುಂಜಾನೆ ಸರಿಸುಮಾರು 2.30 ಕ್ಕೆ ಈ ಘಟನೆ ನಡೆದಿದೆ. ಮೃತರಲ್ಲಿ ಇಬ್ಬರು ಪುರುಷರು, ಒಬ್ಬ ಮಹಿಳೆ ಸೇರಿದ್ದಾರೆ. ಉಳಿದ ಇಬ್ಬರು ಅಪಾಯದಿಂದ ಪಾರಾಗಿರುವ ಕುರಿತು ಪೊಲೀಸರು ಹೇಳಿದ್ದಾರೆ.
ಮಹಾಶಿವರಾತ್ರಿ ಆಚರಣೆಗೂ ಮುನ್ನ ಭಕ್ತರು ತಲಕೋಣ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ವೈ ಕೋಟಾದಿಂದ ಗುಂಡಲಕೋಣಕ್ಕೆ ಹೋಗುವ ಅರಣ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು, ಜಿಲ್ಲಾ ಅಧಿಕಾರಿಗಳಿಂದ ದಾಳಿಯ ವಿವರಗಳನ್ನು ಸಂಗ್ರಹಿಸಿ ಉತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.
ದಾಳಿಯಲ್ಲಿ ಮೃತಪಟ್ಟ ಕುಟುಂಬಗಳಿಗೆ 10 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 5 ಲಕ್ಷ ರೂ. ಆರ್ಥಿಕ ನೆರವು ನೀಡುವಂತೆ ನಿರ್ದೇಶನ ನೀಡಿದ್ದಾರೆ.
