Home » Kerala: ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಹಿರಿಯ ಪೊಲೀಸ್ ಅಧಿಕಾರಿ ಆತ್ಮಹತ್ಯೆ

Kerala: ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಹಿರಿಯ ಪೊಲೀಸ್ ಅಧಿಕಾರಿ ಆತ್ಮಹತ್ಯೆ

by ಕಾವ್ಯ ವಾಣಿ
0 comments
Shringeri

Kerala: 52 ವರ್ಷದ ಹಿರಿಯ ಸಿವಿಲ್ ಪೊಲೀಸ್ ಅಧಿಕಾರಿಯೊಬ್ಬರು ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇರಳದ (Kerala) ವಡಕ್ಕಂಚೇರಿ ಬಳಿ ಫೆ. 25 ರ ತಡರಾತ್ರಿ ಈ ಘಟನೆ ನಡೆದಿದೆ. ಮೃತರನ್ನು ಕಂಟ್ರೋಲ್ ರೂಂನಲ್ಲಿ ನಿಯೋಜಿಸಲಾಗಿದ್ದ ಹಿರಿಯ ಸಿಪಿಒ ರಮೇಶ್ ಬಾಬು ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ಯಾವುದೇ ಆತ್ಮಹತ್ಯೆ ಪತ್ರ ದೊರೆತಿಲ್ಲ. ಆದರೂ ಘಟನೆ ಕುರಿತು ಎಲ್ಲಾ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

You may also like