2
Maddoor: ಮದುವೆ ಆಗಲು ಹೆಣ್ಣು ಸಿಗಲಿಲ್ಲ ಎನ್ನುವ ಕಾರಣಕ್ಕೆ ಮನನೊಂದ ಯುವಕನೋರ್ವ ಕೆಎಸ್‌ಆರ್‌ಟಿಸಿ ಬಸ್‌ನ ಹಿಂಬದಿ ಚಕ್ರಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಮಂಡ್ಯ ಜಿಲ್ಲೆಯ ಮದ್ದೂರು ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಬಳಿ ನಡೆದಿದೆ.
ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ತೂಬಿನಕೆರೆ ಗ್ರಾಮದ ಅರುಣ (24) ಮೃತ ಯುವಕ.
ವೃತ್ತಿಯಲ್ಲಿ ಟ್ರ್ಯಾಕ್ಟರ್ ಚಾಲಕನಾಗಿದ್ದ ಅರುಣ ಎಷ್ಟು ಹುಡುಕಿದರೂ ವಿವಾಹವಾಗಲು ಕನ್ಯೆ ದೊರಕಿರಲಿಲ್ಲ. ಖಿನ್ನತೆಗೆ ಜಾರಿದ್ದ ಅರುಣ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದಲೇ ಬುಧವಾರ ತೂಬಿನಕೆರೆ ಗ್ರಾಮದಿಂದ ಮದ್ದೂರಿಗೆ ಬಂದಿದ್ದಾನೆ. ತಾಲೂಕಿನ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಸಮೀಪ ಬುಧವಾರ ಸಂಜೆ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ ಹಿಂಭಾಗದ ಚಕ್ರದ ಅಡಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
