8
Karnataka Band: ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್ ಗಳಿಗೆ ಹಾಗೂ ಕನ್ನಡಿಗರ ಮೇಲೆ ನಡೆಯುತ್ತಿರುವಂತಹ ನಿರಂತರ ದಬ್ಬಾಳಿಕೆಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು, ಕರ್ನಾಟಕ ಬಂದ್ ಗೆ ಕರೆ ನೀಡಿವೆ.
ಮಾರ್ಚ್ 22 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಮಹಾರಾಷ್ಟ್ರ ಗಡಿ ಭಾಗದಲ್ಲಿ ಕನ್ನಡಿಗರಿಗೆ, ಸಾರಿಗೆ ಬಸ್, ಹಾಗೂ ಬಸ್ ನ ಚಾಲಕ, ನಿರ್ವಾಹಕರಿಗೆ ನಿರಂತರ ಹಲ್ಲೆ ಮಾಡುತ್ತಿರುವುದರಿಂದ ಇದನ್ನು ಖಂಡಿಸಿ ಈ ಬಂದ್ ಅನ್ನು ಹಮ್ಮಿಕೊಳ್ಳಲಾಗಿದೆ.
ಈ ಬಗ್ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ನಡೆದಿದ್ದು, 22 ರಂದು ಬಂದ್ ಮಾಡುವುದಾಗಿ ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ ಎನ್ನಲಾಗಿದೆ.
