Home » Crime: ಅಶ್ಲೀಲ ವಿಡಿಯೋ ರಿಲೀಸ್ ಮಾಡುವುದಾಗಿ ಬೆದರಿಸಿ ಸುಲಿಗೆ ಮಾಡುತ್ತಿದ್ದ ವ್ಯಕ್ತಿ ಬಂಧನ!

Crime: ಅಶ್ಲೀಲ ವಿಡಿಯೋ ರಿಲೀಸ್ ಮಾಡುವುದಾಗಿ ಬೆದರಿಸಿ ಸುಲಿಗೆ ಮಾಡುತ್ತಿದ್ದ ವ್ಯಕ್ತಿ ಬಂಧನ!

by ಕಾವ್ಯ ವಾಣಿ
0 comments

Crime: ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾ ದಲ್ಲಿ ಬಿಡುಗಡೆ ಮಾಡುವುದಾಗಿ ಹೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಕಾರ್ಕಳದ ಈದು ಗ್ರಾಮದ ಸತೀಶ್ ಹೊಸಮಾರು (36) ಎಂಬಾತನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.

ಮಾಹಿತಿ ಪ್ರಕಾರ, ಸತೀಶ್ ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ನಂತಹ ಸಾಮಾಜಿಕ ಮಾಧ್ಯಮಗಳ ಮೂಲಕ ಮಹಿಳೆಯರ ಮೊಬೈಲ್ ಸಂಖ್ಯೆಗಳನ್ನು ಪಡೆದುಕೊಳ್ಳುತ್ತಿದ್ದ. ನಂತರ ಅವರ ಅಶ್ಲೀಲ ವಿಡಿಯೋಗಳು ತನ್ನ ಬಳಿ ಇವೆ ಎಂದು ಬೆದರಿಸಿ, ಹಣಕ್ಕೆ ಬೇಡಿಕೆಯಿಡುತ್ತಿದ್ದ. ಹಣ ನೀಡದಿದ್ದರೆ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಎಚ್ಚರಿಕೆ ನೀಡುತ್ತಿದ್ದ.

ಈ ವೇಳೆ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದಲ್ಲಿ , ಕದ್ರಿ ಪೊಲೀಸರು ಪ್ರಕರಣ (Crime) ದಾಖಲಿಸಿ ತನಿಖೆ ಆರಂಭಿಸಿದ್ದರು. ಆರೋಪಿಯ ಮೊಬೈಲ್ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಅದರಲ್ಲಿ ಆತನ ಸುಲಿಗೆ ಚಟುವಟಿಕೆಗಳಿಗೆ ಸಂಬಂಧಿಸಿದ ಸಾಕ್ಷ್ಯಗಳು ದೊರೆತಿವೆ ಎನ್ನಲಾಗಿದೆ.

You may also like