Home » Ganga Kalyana Scheme : ‘ಗಂಗಾ ಕಲ್ಯಾಣ ಯೋಜನೆ’ಗೆ ಅರ್ಜಿ ಆಹ್ವಾನ

Ganga Kalyana Scheme : ‘ಗಂಗಾ ಕಲ್ಯಾಣ ಯೋಜನೆ’ಗೆ ಅರ್ಜಿ ಆಹ್ವಾನ

0 comments

Ganga kalyana Scheme: ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಸಕಲ ಸೌಲಭ್ಯಗಳನ್ನು ಕಲ್ಪಿಸಿಕೊಡುತ್ತಿದೆ. ರೈತರು ಕೂಡ ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಅಂತೆಯೇ ಇದೀಗ ಸರ್ಕಾರ ಉಚಿತವಾಗಿ ಬೊರ್ವೆಲ್ ಕೊರೆಸಿ, ಎಲ್ಲಾ ವ್ಯವಸ್ಥೆ ಕಲ್ಪಿಸುವ ಯೋಜನೆಯನ್ನು ಜಾರಿಗೊಳಿಸಿದೆ. ಇದುವೇ ಗಂಗಾ ಕಲ್ಯಾಣ ಯೋಜನೆ. ಇದಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಹೌದು, ಕೃಷಿ ಭೂಮಿಯಲ್ಲಿ ರೈತರಿಗೆ ತುಂಬಾ ಅಗತ್ಯವಾಗಿ ಬೇಕಾಗಿರುವುದು ನೀರು. ಕೆರೆ, ಬಾವಿ, ನದಿ, ಹೊಳೆಗಳಿದ್ದವರಿಗೆ ಇದು ಸುಲಭದಲ್ಲಿ ಸಿಗುತ್ತದೆ. ಆದರೆ ಉಳಿದವರಿಗೆ ಬೊರ್ವೆಲ್ ಅನ್ನು ಅರಸಬೇಕು. ಆದರೆ ಒಂದು ಬೊರ್ವೆಲ್ ತೆಗೆಸಿ, ಪಂಪ್ ಇಳಿಸಿ, ಎಲ್ಲಾ ವ್ಯವಸ್ಥೆ ಮಾಡಿಕೊಳ್ಳುವಾಗ ಲಕ್ಷಾಂತರ ರೂಪಾಯಿ ಖರ್ಚಾಗುತ್ತದೆ. ಆದರೆ ರೈತರಿಗೆ ಇಷ್ಟು ವ್ಯಯಿಸುವ ಶಕ್ತಿ ಇರುವುದಿಲ್ಲ. ಹೀಗಾಗಿ ಇಂಥ ರೈತರಿಗೆ ನೆರವಾಗಲು ಸರ್ಕಾರ ಮುಂದಾಗಿದ್ದು, ಉಚಿತವಾಗಿ ಬೊರ್ವೆಲ್ ಕೊರೆಸಲು 2024-25ನೇ ಸಾಲಿಗೆ ಗಂಗಾ ಕಲ್ಯಾಣ ಯೋಜನೆಯಡಿ ಪರಿಶಿಷ್ಟ ಜಾತಿ ವರ್ಗದ ರೈತರು ತಮ್ಮ ಜಮೀನುಗಳಲ್ಲಿ ಕೊಳವೆ ಬಾವಿ ಕೊರೆಸಿರುವ ರೈತರಿಗೆ ಸಹಾಯಧನ ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಏನಿದು ಯೋಜನೆ?

ಬೋರ್‌ವೆಲ್‌ ಕೊರೆಯುವ ಮೂಲಕ ಹಾಗೂ ತೆರೆದ ಬಾವಿ ತೋಡುವ ಮೂಲಕ ಕೃಷಿ ಭೂಮಿಗೆ ನೀರನ್ನು ಪೂರೈಸುವುದೇ ಗಂಗಾ ಕಲ್ಯಾಣ ಯೋಜನೆ. ವಿದ್ಯುತ್‌ ಸಂಪರ್ಕ ಕಲ್ಪಿಸಿ ಪಂಪ್‌-ಮೋಟಾರ್‌ ಮೂಲಕ ನೀರೆತ್ತುವುದು ಈ ಯೋಜನೆಯ ಉದ್ದೇಶವಾಗಿದೆ.

ಅರ್ಜಿ ಸಲ್ಲಿಸಲು ಈ ದಾಖಲೆಗಳು :

ರೈತರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.

ಆಧಾರ್ ಕಾರ್ಡ್

ಬ್ಯಾಂಕ್ ಪಾಸ್ ಬುಕ್

ಜಾತಿ ಮತ್ತು ಆದಾಯ ಪ್ರಮಾಣ ಪತ್ರ

ಸ್ವಂತ ಜಮೀನಿನ ಪಹಣಿ

ಅರ್ಜಿದಾರರ ಭಾವಚಿತ್ರ

ಬಿಪಿಎಲ್ ರೇಷನ್ ಕಾರ್ಡ್

ಮೊಬೈಲ್ ಸಂಖ್ಯೆ

ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ

ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು.

ಹಾಲಿ ಜಮೀನುಗಳು ಕೃಷಿ ಚಟುವಟಿಕೆಯಲ್ಲಿರಬೇಕು.

ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು.

ಫಲಾನುಭವಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.

ವಯಸ್ಸು 18 ರಿಂದ 60 ವರ್ಷದೊಳಗಿರಬೇಕು.

ಕುಟುಂಬ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98 ಸಾವಿರ ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 1.20 ಲಕ್ಷಗಳು ಒಳಗಿರಬೇಕು.

ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 02 ಎಕರೆ ಜಮೀನು ಹೊಂದಿರಬೇಕು.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿದಾರರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಯನ್ನು ಸೆ.15 ರೊಳಗಾಗಿ ಸಲ್ಲಿಸಬಹುದು.

You may also like