Home » Sullia: ಮಾ.15ರಿಂದ ಸುಳ್ಯ ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ: 4 ದಿನಗಳ ಮಹೋತ್ಸವಕ್ಕೆ ಸಕಲ ಸಿದ್ಧತೆ

Sullia: ಮಾ.15ರಿಂದ ಸುಳ್ಯ ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ: 4 ದಿನಗಳ ಮಹೋತ್ಸವಕ್ಕೆ ಸಕಲ ಸಿದ್ಧತೆ

by ಕಾವ್ಯ ವಾಣಿ
0 comments

Sullia: ಸುಳ್ಯದ (Sullia) ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಮುಂದಿನ ಮಾರ್ಚ್ ತಿಂಗಳ 15 ರಿಂದ 18 ರ ತನಕ ನಡೆಯಲಿರುವ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ಅಂತಿಮ ಹಂತದಲ್ಲಿದೆ ಎಂದು ಮಹೋತ್ಸವ ಸಮಿತಿಯ ಮಹೋತ್ಸವ ಸಮಿತಿಯ ಅಧ್ಯಕ್ಷ ಸುಧಾಕರ ರೈ ಹಾಗೂ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಪವಿತ್ರನ್ ಗುಂಡ್ಯ ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.

ಅರಂಬೂರು ವಯನಾಟ್ ಕುಲವನ್ ದೈವಸ್ಥಾನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಮಹೋತ್ಸವ ಸಮಿತಿಯ ಅಧ್ಯಕ್ಷ ಪಿ.ಬಿ.ಸುಧಾಕರ ರೈ ಕುತ್ತಿಕೋಲು ಶ್ರೀ ತಂಬೂರಾಟಿ ಭಗವತಿ ಕ್ಷೇತ್ರದ ಪರಿಧಿಯಲ್ಲಿ ಬರುವ ಸುಳ್ಯ ಪ್ರಾದೇಶಿಕ ಸಮಿತಿ ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನ ಸುಮಾರು 20 ವರ್ಷಗಳ ಹಿಂದೆ ಪುನ‌ರ್ ಪ್ರತಿಷ್ಠಾ ಮಹೋತ್ಸವ ನಡೆದಿತ್ತು. ಇದೀಗ ದೈವಸ್ಥಾನದಲ್ಲಿ ಕೆಲವೊಂದು ಅಭಿವೃದ್ಧಿ ಕಾರ್ಯಗಳು ನಡೆದು ದೈವಂಕಟ್ಟು ಮಹೋತ್ಸವಕ್ಕೆ ಅಣಿಯಾಗುತಿದೆ. ಸುಮಾರು 300 ವರ್ಷಗಳ ಬಳಿಕ ಇಲ್ಲಿ ದೈವಂಕಟ್ಟು ಉತ್ಸವ ನಡೆಯಲಿದೆ. ಎಲ್ಲರ ಸಹಕಾರದಲ್ಲಿ ಉತ್ಸವ ನಡೆಯಲಿದ್ದು, 4 ದಿನದ ಉತ್ಸವದಲ್ಲಿ ಸುಮಾರು ಒಂದು ಲಕ್ಷಕ್ಕೂ ಮಿಕ್ಕಿ ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಮಹೋತ್ಸವಕ್ಕೆ ಫೆ.20ರಂದು ಕೂವಂ ಅಳಕ್ಕಲ್‌(ಭತ್ತ ಅಳೆಯುವುದು), ವೀಳ್ಯ ಕೊಡುವ ಕಾರ್ಯಕ್ರಮ ನಡೆದು ಮಹೋತ್ಸವಕ್ಕೆ ಚಾಲನೆ ದೊರೆತಿದೆ. ಮಾ.15ರಂದು ಶನಿವಾರ ಪೂ.10 ರಿಂದ ಹಸಿರುವಾಣಿ ಮೆರವಣಿಗೆ ಶ್ರೀ ಮೂಕಾಂಬಿಕ ಭಜನಾ ಮಂದಿರದ ವಠಾರದಿಂದ ಹೊರಡಲಿದೆ. ವಿವಿಧ ಕಡೆಗಳಿಂದ ಆಗಮಿಸಿದ ಹಸಿರುವಾಣಿ ಭಜನಾ ಮಂದಿರದಿಂದ ಮೆರವಣಿಗೆ ಮೂಲಕ ಕ್ಷೇತ್ರಕ್ಕೆ ಆಗಮಿಸಲಿದೆ.

You may also like