Karnataka Budget 2025-26: ಸಿಎಂ ಸಿದ್ದರಾಮಯ್ಯ ಅವರು ಇಂದು ಶುಕ್ರವಾರ 2025-26 ನೇ ಸಾಲಿನ 16ನೇ ಬಜೆಟ್ ಮಂಡನೆ ಮಾಡುತ್ತಿದ್ದು, ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್ ಮಂಡನೆ ನಡೆಯುತ್ತಿದೆ. ಈ ಬಾರಿಯ ಬಜೆಟ್‌ನಲ್ಲಿ ಸಾಕಷ್ಟು ನಿರೀಕ್ಷೆಗಳು ಇದೆ.
ಬೆಂಗಳೂರು ನಗರ ವಿವಿಗೆ ಮಾಜಿ ಪ್ರಧಾನಿ ʼಮನಮೋಹನ್ ಸಿಂಗ್ʼ ಹೆಸರು ನಾಮಕಾರಣ ಮಾಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ.
ಮೆಜೆಸ್ಟಿಕ್ ಬಸ್ ನಿಲ್ದಾಣದ ಅಭಿವೃದ್ಧಿಗೆ ಮತ್ತು ಆಧುನೀಕರಣಕ್ಕೆ ಮಹತ್ವದ ಘೊಷಣೆ. ವಾಣಿಜ್ಯ ಸಂಕೀರ್ಣದೊಂದಿಗೆ ಸಾರಿಗೆ ಹಬ್ ಆಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಬಜೆಟ್‌ನಲ್ಲಿ ಸಿಎಂ ಘೋಷಣೆ ಮಾಡಿದ್ದಾರೆ.
ರಾಜ್ಯದ ಇತರ ಪ್ರಮುಖ ನಗರಗಳ ಬಸ್ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲೂ ಬಜೆಟ್‌ನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಮೈಸೂರಿನ ಬನ್ನಿಮಂಟಪದಲ್ಲಿ ಅತ್ಯಾಧುನಿಕ ಬಸ್ ನಿಲ್ದಾಣವನ್ನು ಒಟ್ಟಾರೆ 120 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ರಾಜ್ಯದ ವಿವಿಧ ಸಾರಿಗೆ ನಿಗಮಗಳಲ್ಲಿ 1000 ಹೊಸ ಡೀಸೆಲ್ ಬಸ್ಸುಗಳನ್ನು ಜಿಸಿಸಿ ಆಧಾರದಲ್ಲಿ ಸೇರ್ಪಡೆಗೊಳಿಸಲಾಗುವುದು ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ.
ಕಲ್ಯಾಣ ಕರ್ನಾಟಕ ಭಾಗದವರಿಗೆ ಸಿಹಿ ಸುದ್ದಿ ದೊರಕಿದ್ದು, 5267 ಶಿಕ್ಷಕರ ಹುದ್ದೆ ಭರ್ತಿ ಮಾಡಲಾಗುವುದು ಎಂದು ಬಜೆಟ್‌ನಲ್ಲಿ ಸಿಎಂ ಘೋಷಣೆ ಮಾಡಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 5267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ತರ್ಕಬದ್ಧಗೊಳಿಸಿ 5000 ಹುದ್ದೆ ಭರ್ತಿ ಮಾಡಲಾಗುವುದು ಎಂದು ಹೇಳಿದರು.
