Summer Holiday : ರಾಜ್ಯದಲ್ಲಿ ಬೇಸಿಗೆಯ ಝಳ ವಿಪರೀತ ಹೆಚ್ಚುತ್ತಿದೆ. ಬಿಸಿಲ ಬೇಗೆಗೆ ಜನರು ಬೆಂದು ಹೋಗುತ್ತಿದ್ದಾರೆ. ಹೀಗಾಗಿ ಸರ್ಕಾರವು ಈ ನಿಟ್ಟಿನಲ್ಲಿ ಮಹತ್ವದ ಕ್ರಮವನ್ನು ಕೈಗೊಂಡಿದ್ದು ಆದಷ್ಟು ಬೇಗ ಶಾಲೆಗಳಲ್ಲಿ ಪರೀಕ್ಷೆಗಳನ್ನು ಮುಗಿಸಿ ಅವಧಿಗೂ ಮುಂಚಿತವಾಗಿ ಬೇಸಿಗೆ ರಜೆ ನೀಡಲು ಚಿಂತಿಸಿದೆ.
ಹೌದು, ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲಿದ್ದು, ಈ ಹಿನ್ನೆಲೆ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಪರೀಕ್ಷೆಗಳನ್ನು ಬೇಗ ಮುಗಿಸಿ ಶಾಲೆಗಳಿಗೆ ಅವಧಿಗೂ ಮುನ್ನ ಬೇಸಿಗೆ ರಜೆ ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಈಗಾಗಲೇ ಹವಾಮಾನ ಇಲಾಖೆ ಬಹುತೇಕ ಜಿಲ್ಲೆಗಳಲ್ಲಿ ಬೇಸಿಗೆ ಮುನ್ನವೇ ತಾಪಮಾನ ಏರಿಕೆ ಎಚ್ಚರಿಕೆ ನೀಡಿದೆ. ಸಾಮಾನ್ಯವಾಗಿ ಶಾಲಾ ಮಕ್ಕಳಿಗೆ ಏರ್ಪ್ರಿಲ್ ನಿಂದ ಬೇಸಿಗೆ ರಜೆ ನೀಡಲಾಗುತ್ತದೆ. ಆದರೆ ಈ ಬಾರಿ ರಜ್ಯಾದ್ಯಂತ ಬೇಸಿಗೆಗೆಗೂ ಮುನ್ನ ತಾಪಮಾನ ಹೆಚ್ಚುತ್ತಿದ್ದು, ಅವಧಿಗೂ ಮುನ್ನವೇ ಈ ಬಾರಿ ಶಾಲೆಗಳಿಗೆ ರಜೆ ನೀಡುವ ಸಾಧ್ಯತೆ ಇದೆ.
ಕಳೆದ ಬಾರಿಗೆ ಹೋಲಿಕೆ ಮಾಡಿದ್ರೆ ಈ ಬಾರಿ ಅಂದ್ರೆ, 2025ರಲ್ಲಿ ಬೇಸಿಗೆಗೂ ಮುನ್ನ ರಣಭೀಕರ ಬಿಸಿಲು ಮುಂದುವರೆದಿದೆ. ಪರಿಣಾಮ ಜನರು ಮನೆಯಿಂದ ಹೊರಬರಲು ಹೆದರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿಯಲ್ಲೂ ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಪೋಷಕರು ಗಮನ ಹರಿಸಿ ಬೇಸಿಗೆ ರಜೆ ಅವವಧಿಗೂ ಮುನ್ನ ಘೋಷಣೆ ಮಾಡುವ ನಿರೀಕ್ಷೆಯಲ್ಲಿದ್ದಾರೆ.
