Home » Karnataka Budget 2025-26: ಅರ್ಚಕರ ವಾರ್ಷಿಕ ತಸ್ತೀಕ್‌ ಹೆಚ್ಚಳ

Karnataka Budget 2025-26: ಅರ್ಚಕರ ವಾರ್ಷಿಕ ತಸ್ತೀಕ್‌ ಹೆಚ್ಚಳ

0 comments

Karnataka Budget 2025-26: ಅರ್ಚಕರಿಗೆ ಪಾವತಿಸುವ ವಾರ್ಷಿಕ ತಸ್ತೀಕ್‌ ಮೊತ್ತದಲ್ಲಿ ಹೆಚ್ಚಳ ಮಾಡಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ 25,551 ಧಾರ್ಮಿಕ ಸಂಸ್ಥೆಗಳ/ ದೇವಾಲಯಗಳಲ್ಲಿರುವ ಅರ್ಚಕರಿಗೆ ಪ್ರಸ್ತುತ ಪಾವತಿ ಮಾಡುತ್ತಿರುವ ವಾರ್ಷಿಕ ತಸ್ತೀಕ್‌ ಮೊತ್ತವನ್ನು 60,000ರೂ. ಗಳಿಂದ 72,000 ರೂ.ಗಳಿಗೆ ಹೆಚ್ಚಳ ಮಾಡಲಾಗುವುದು ಎಂದು ಬಜೆಟ್‌ನಲ್ಲಿ ಸಿಎಂ ಘೋಷಣೆ ಮಾಡಿದ್ದಾರೆ.

ಸರಕಾರದ ವತಿಯಿಂದ ಇನ್ನು ಮುಂದೆ ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆಯ ಅಧಿಸೂಚಿತ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವೇತನ ಮತ್ತಿತರ ಭತ್ಯೆಗಳನ್ನು ನೀಡಲಾಗುವುದು.

ರಾಜ್ಯದಲ್ಲಿ ಒತ್ತುವರಿಯಾಗಿರುವ 328 ದೇವಾಲಯಗಳ ಆಸ್ತಿಗಳನ್ನು ಸಂರಕ್ಷಣೆ ಮಾಡಲು ಒತ್ತುವರಿಯನ್ನು ತೆರವು ಮಾಡಲಾಗುವುದು. ʼಭೂ-ವರಾಹʼ ಯೋಜನೆಯ ಮೂಲಕ ಈ ದೇವಾಲಯಗಳ ಸ್ಥಿರಾಸ್ತಿಗಳನ್ನು ದಾಖಲೀಕರಣ ಮಾಡಲಾಗುವುದು.

ʼಕರ್ನಾಟಕ ದೇವಾಲಯಗಳ ವಸತಿ ಕೋಶʼವನ್ನು ಸ್ಥಾಪನೆ ಮಾಡಲಾಗುವುದು, ಸೊರಬ ತಾಲ್ಲೂಕಿನ ಚಂದ್ರಗುತ್ತಿ ಗ್ರಾಮವನ್ನು ಧಾರ್ಮಿಕ ಹಾಗೂ ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಪಡಿಸಲು ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವುದಾಗಿ ಬಜೆಟ್‌ನಲ್ಲಿ ಸಿಎಂ ಘೋಷಣೆ ಮಾಡಿದ್ದಾರೆ.

You may also like