4
Muda Case: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ಗೆ ಇಡಿ ನೀಡಿದ್ದ ಸಮನ್ಸ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಲಾಗಿದೆ.
ಪಾರ್ವತಿ ಹಾಗೂ ಭೈರತಿ ಸುರೇಶ್ಗೆ ಇಡಿ ಸಮನ್ಸ್ ಜಾರಿ ಮಾಡಿತ್ತು. ಇದನ್ನು ಪ್ರಶ್ನೆ ಮಾಡಿದ ಇಬ್ಬರು ಹೈಕೋರ್ಟ್ಗೆ ಮೊರೆ ಹೋಗಿದ್ದ ಇಂದು (ಮಾ.7) ರಂದು ಹೈಕೋರ್ಟ್ ಪೀಠ ಇಡಿ ಸಮನ್ಸ್ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಇಡಿ ಮುಡಾ ಹಗರಣ ಪ್ರಕರಣದಲ್ಲಿ ಪ್ರವೇಶ ಮಾಡಿದೆ. ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಸೇರಿ ಇತರರಿಗೆ ಇಡಿ ಸಮನ್ಸ್ ನೀಡಿತ್ತು. ಸಿಎಂ ಪತ್ನಿ ಹಾಗೂ ಭೈರತಿ ಸುರೇಶ್ ಅವರು ಇಬ್ಬರು ಪ್ರತ್ಯೇಕವಾಗಿ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ಇಡಿ ಸಮನ್ಸ್ನ್ನು ರದ್ದು ಮಾಡಿ ಆದೇಶ ಮಾಡಿದೆ.
