Home » Chitradurga: ಲಾರಿ-ಇನೋವಾ ಕಾರು ಭೀಕರ ಅಪಘಾತ; ಐವರು ಸಾವು

Chitradurga: ಲಾರಿ-ಇನೋವಾ ಕಾರು ಭೀಕರ ಅಪಘಾತ; ಐವರು ಸಾವು

0 comments

Chitradurga: ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಇಂದು (ಮಾ.9) ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ಬೆಂಗಳೂರು ಮೂಲದ ಬಿಎಂಟಿಸಿ ನಿವೃತ್ತ ನೌಕರ ಶಾಂತಮೂರ್ತಿ (60), ವಿದ್ಯಾರಣ್ಯಪುರದ ರುದ್ರಸ್ವಾಮಿ (52), ಬೆಂಗಳೂರು ಉತ್ತರದ ಈರಣ್ಣ ಬಡಾವಣೆಯ ಮಲ್ಲಿಕಾರ್ಜುನ (50), ನಿರ್ದೇಚಿದಂಬರಾಚಾರ್‌ (52) ಮೃತ ವ್ಯಕ್ತಿಗಳು. ಇನ್ನೋರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಿತ್ರದುರ್ಗ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.

ಕಾರಿನಲ್ಲಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಪ್ರಸಾದ ಪತ್ತೆಯಾಗಿದ್ದು, ಸವದತ್ತಿಯ ರೇಣುಕಾ ಯಲ್ಲಮ್ಮ ದೇಗುಲಕ್ಕೆ ಹೋಗಿ ಹಿಂದಿರುಗುತ್ತಿದ್ದರು ಎನ್ನಲಾಗಿದೆ.

You may also like