3
Mangaluru: ಮಂಗಳೂರಿನ ಕದ್ರಿ ದೇವಸ್ಥಾನದ ದ್ವಾರದ ಬಳಿ ಸೋಮವಾರ (ಮಾ.10) ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ತಡೆದು ಪೊಲೀಸರಿಗೊಪ್ಪಿಸಿ ಘಟನೆ ನಡೆದಿದೆ.
ಭಜರಂಗದಳ ಕಾರ್ಯಕರ್ತರಿಗೆ ಟೆಂಪೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಮಾಡುತ್ತಿರುವ ಕುರಿತು ಮಾಹಿತಿ ದೊರಕಿದ್ದು, ಅವರು ಕದ್ರಿ ದೇವಸ್ಥಾನದ ಬಳಿ ವಾಹನವನ್ನು ತಡೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಗೋ ಮಾಂಸ ಇರುವುದು ಪತ್ತೆಯಾಗಿದೆ. ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದಾದ ನಂತರ ಕದ್ರಿ ಪೊಲೀಸರು ಪರಿಶೀಲನೆ ನಡೆಸಿದ ಸಂದರ್ಭ ವಾಹನದಲ್ಲಿ ಸುಮಾರು 100 ಕೆಜಿಗೂ ಅಧಿಕ ಗೋ ಮಾಂಸ ಇರುವುದು ಪತ್ತೆಯಾಗಿರುವ ಕುರಿತು ವರದಿಯಾಗಿದೆ.
ನಂತರ ಪೊಲೀಸರು ಗೋ ಮಾಂಸ ಹಾಗೂ ವಾಹನವನ್ನು ಜಪ್ತಿ ಮಾಡಿದ್ದಾರೆ. ಕದ್ರಿ ಪೊಲೀಸರು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮಾಡುತ್ತಿದ್ದಾರೆ.
