Rain: ಕರ್ನಾಟಕದ ವಿವಿಧ ಭಾಗದಲ್ಲಿ ಬಿಸಿಲ ಝಳ (ತಾಪಮಾನ) ಹೆಚ್ಚಳವಾಗುತ್ತಿರುವ ನಡುವೆ ಮಾರ್ಚ್ 11, ಮಾರ್ಚ್12 ಹಾಗೂ ಮಾರ್ಚ್13 ರಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಮಾರ್ಚ್ 11: ನಾಳೆ ಬೆಂಗಳೂರು ಸೇರಿದಂತೆ ವಿವಿಧ ಭಾಗದಲ್ಲಿ ಮಳೆಯಾಗಲಿದೆ ಎಂದು ಐಎಂಡಿ ರಿಪೋರ್ಟ್ ಹೇಳಿದೆ. ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ. ಅಲ್ಲದೆ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲೂ ಭರ್ಜರಿ ಮಳೆಯಾಗಲಿದೆ.
ಮಾರ್ಚ್ 12: ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಧಾರಾಕಾರ ಮಳೆಯಾಗಲಿದೆ.
ಮಾರ್ಚ್ 13ಕ್ಕೆ: ಮೈಸೂರು, ಚಾಮರಾಜನಗರ, ಕೊಡಗು, ಹಾಸನ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿಯು ತಿಳಿಸಿದೆ.
