4
Ration Card: ಹೊಸ ಬಿಪಿಎಲ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಿದ ಅರ್ಹರಿಗೆ ಆಹಾರ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದ್ದು ಸದ್ಯದಲ್ಲೇ ಕಾರ್ಡ್ ವಿತರಣೆ ಮಾಡುವುದಾಗಿ ಘೋಷಿಸಿದೆ.
ಹೌದು, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಈ ಕುರಿತಾಗಿ ಮಾಹಿತಿ ನೀಡಿದ್ದುಹೊಸ BPL ಸೇರಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಶೀಘ್ರವೇ ಹೊಸ ಪಡಿತರ ಚೀಟಿ ವಿತರಣೆ ಶುರುವಾಗಲಿದೆ ಎಂದಿದ್ದಾರೆ.
ವಿಧಾನ ಪರಿಷತ್ ನಲ್ಲಿ ಸಿಟಿ ರವಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಇನ್ನೆರಡು ತಿಂಗಳಲ್ಲಿ ಹೊಸ ಬಿಪಿಎಲ್ ಪಡಿತರ ಚೀಟಿ ನೀಡುವ ಪ್ರಕ್ರಿಯೆ ಶುರುವಾಗಲಿದೆ. ಜೊತೆಗೆ ಕೇಂದ್ರ ಸರ್ಕಾರದ ಮಾನದಂಡಗಳನ್ನು ಮುಂದಿಟ್ಟುಕೊಂಡು ಕಾರ್ಡುಗಳನ್ನು ಪರಿಶೀಲಿಸಲಾಗುವುದು. ಅನರ್ಹ ಬಿಪಿಎಲ್ ಫಲಾನುಭವಿಗಳನ್ನು ಪತ್ತೆ ಮಾಡಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮಿತಿ ರಚಿಸಿ ಮನೆಗಳಿಗೆ ಭೇಟಿ ನೀಡಿ ಖುದ್ದಾಗಿ ಪರಿಶೀಲಿಸಲು ಉದ್ದೇಶಿಸಲಾಗಿದೆ ಎಂದಿದ್ದಾರೆ.
