9
Dharmasthala: ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ಕನ್ಯಾಡಿ ಪುಡ್ಕೆತ್ ಚಡವು ಬಳಿ ನಡೆದಿದೆ.
ಉಜಿರೆಯಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಕಾರಿಗೆ, ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಬಂದು ಹಾವೇರಿಗೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಕಾರು ಮತ್ತು ಬಸ್ ಜಖಂಗೊಂಡಿದೆ.
ಈ ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ ಎಂದು ವರದಿಯಾಗಿದೆ.
