3
Kapu: ಕಾಪುವಿನ (Kapu) ಮಣಿಪುರ ದೆಂದೂರ್ ಕಟ್ಟೆ ಮನೋಜ್ ಬಾರ್ ಬಳಿ ಮೃತದೇಹ ಪತ್ತೆಯಾಗಿದ್ದು ಮೃತ ವ್ಯಕ್ತಿಯನ್ನು ನಲ್ವತ್ತು ವರ್ಷದ ಅಶೋಕ್ ದೇವಾಡಿಗ ಎಂದು ಗುರುತಿಸಲಾಗಿದೆ. ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಮೊದಲಿಗೆ ಅಶೋಕ್ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದು ಪರೀಕ್ಷಿಸಿದ ವೈದ್ಯರು ಅದಾಗಲೇ ಅವರು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.
