Home » Crime: ಮೂಡುಬಿದಿರೆ : ಬಾಲಕಿಗೆ ಕಿರುಕುಳ ಪ್ರಕರಣ : ಆರೋಪಿ ಅರೆಸ್ಟ್!

Crime: ಮೂಡುಬಿದಿರೆ : ಬಾಲಕಿಗೆ ಕಿರುಕುಳ ಪ್ರಕರಣ : ಆರೋಪಿ ಅರೆಸ್ಟ್!

by ಕಾವ್ಯ ವಾಣಿ
0 comments

Crime: ಪಾಲಡ್ಕ ಗ್ರಾಪಂ ವ್ಯಾಪ್ತಿಯಲ್ಲಿ ಬಾಲಕಿಗೆ ಕಿರುಕುಳ ನೀಡಿದ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಅಲಂಗಾರು ಉಳಿಯಾ ನಿವಾಸಿ ಪವನ್ ಕುಮಾರ್, ಎಂಬ ಆರೋಪಿಯನ್ನ ಮೂಡುಬಿದಿರೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಈತ ಮಾ.8ರಂದು ಸಂಜೆ ಪಾಲಡ್ಕ ಗ್ರಾಪಂ ವ್ಯಾಪ್ತಿಯ ಕಡಂದಲೆ ವಿದ್ಯಾಗಿರಿ ಬಳಿ, ಜನತಾ ನಗರದಲ್ಲಿ ಟ್ಯೂಶನ್ ಮುಗಿಸಿ ಸೈಕಲ್‌ ನಲ್ಲಿ ಮನೆಗೆ ತೆರಳುತ್ತಿದ್ದ ಬಾಲಕಿಯನ್ನು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದು ನಿರ್ಜನ ಪ್ರದೇಶದಲ್ಲಿ ಆಕೆಯನ್ನು ಅಡ್ಡಗಟ್ಟಿ ಕಿರುಕುಳ (Crime) ನೀಡಿದ್ದ ಎಂದು ದೂರಲಾಗಿದೆ.

ಬಾಲಕಿ ಆತನಿಂದ ತಪ್ಪಿಸಿಕೊಂಡು ಮನೆಗೆ ಓಡಿ ಹೋಗಿದ್ದು, ಈ ವೇಳೆ ಆರೋಪಿ ಪವನ್ ಕುಮಾರ್ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಇದೀಗ ಆರೋಪಿ ಪವನ್ ಕುಮಾರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

You may also like