5
Holiday: ಕರ್ನಾಟಕದ ವಿವಿಧ ಭಾಗದಲ್ಲಿ ಬಿಸಿಲ ಝಳ (ತಾಪಮಾನ) ಹೆಚ್ಚಳವಾಗುತ್ತಿರುವ ನಡುವೆ ರಾಜ್ಯದಲ್ಲಿ ಸುಮಾರು 9 ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಭಾಗದ ಶಾಲೆಗಳಿಗೆ ರಜೆ ಘೋಷಣೆಯಾಗುವ ಸಾಧ್ಯತೆ ಕೂಡ ಇದೆ.
ಹೌದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಶಿವಮೊಗ್ಗ, ಬಳ್ಳಾರಿ, ಮಂಡ್ಯ, ಹಾಸನ, ಕೋಲಾರ, ತುಮಕೂರು, ಕೊಡಗು, ಚಾಮರಾಜನಗರ ಜಿಲ್ಲೆಗಳು ಹಾಗೂ ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಮಾರ್ಚ್ 14ರವರೆಗೆ ರಣಭೀಕರ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಮಳೆಯ ತೀವ್ರತೆ ಗಮನಿಸಿ ಅದರ ಆಧಾರದ ಮೇಲೆ ಆಯಾ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
