Home » Europe: ನೈಟ್‌ಕ್ಲಬ್‌ನಲ್ಲಿ ಬೆಂಕಿ ಅವಘಡ; 59 ಜನ ದಾರುಣ ಸಾವು!

Europe: ನೈಟ್‌ಕ್ಲಬ್‌ನಲ್ಲಿ ಬೆಂಕಿ ಅವಘಡ; 59 ಜನ ದಾರುಣ ಸಾವು!

0 comments
Firecracker Units Explosion

Europe: ಯುರೋಪಿನ ಉತ್ತರ ಮ್ಯಾಸಿಡೋನಿಯಾದ ನೈಟ್ ಕ್ಲಬ್‌ನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿ 59 ಜನರು ಮೃತಪಟ್ಟಿದ್ದು, 150 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮ್ಯಾಸಿಡೋನಿಯಾದ ಪೂರ್ವ ಭಾಗದಲ್ಲಿರುವ ಕೊಕಾನಿ ಪಟ್ಟದಲ್ಲಿರುವ ನೈಟ್ ಕ್ಲಬ್ ನಲ್ಲಿ ಶನಿವಾರ ಮಧ್ಯರಾತ್ರಿ 2.35 ರ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ.

ಪಟಾಕಿ ಸಿಡಿತದಿಂದಾಗಿ ಮೇಲ್ಛಾವಣಿಗೆ ಬೆಂಕಿ ತಗುಲಿ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿರುವಾಗಿ ಆಂತರಿಕ ಸಚಿವ ಪಾಂಚೆ ತೋಸ್ಕೋಮ್ಮಿ ತಿಳಿಸಿದ್ದಾರೆ. ಬೆಂಕಿ ಅವಘಡದಲ್ಲಿ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮೃತಪಟ್ಟಿದ್ದಾರೆ. 155 ಜನರನ್ನು ರಕ್ಷಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದು ಮ್ಯಾಸಿಡೋನಿಯಾದ ಇತಿಹಾಸದಲ್ಲೇ ಅತ್ಯಂತ ದೊಡ್ಡ ದುರಂತಗಳಲ್ಲಿ ಒಂದಾಗಿದೆ ಎಂದು ಆರೋಗ್ಯ ಸಚಿವ ಅರ್ಬೆನ್ ತಾರಾವರಿ ತಿಳಿಸಿದ್ದಾರೆ. ವಾರಾಂತ್ಯದ ಹಿನ್ನೆಲೆಯಲ್ಲಿ ನೈಟ್ ಕ್ಲಬ್‌ನಲ್ಲಿ ಹೆಚ್ಚಿನ ಜನರು ಪಾರ್ಟಿ ಮಾಡುತ್ತಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

You may also like