7
Vijayapura: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವಿಗೀಡಾದ ಘಟನೆ ವಿಜಯಪುರ ತಾಲೂಕಿನ ಹೆಗಡಿಹಾಳ ಕ್ರಾಸ್ ಬಳಿ ನಡೆದಿದೆ.
ಉತ್ನಾಳದ ಬೀರಪ್ಪ ಗೋಡೆಕರ್ (30), ಹಣಮಂತ ಕಡ್ಲಿಮಟ್ಟಿ (25), ಮತ್ತು ಜುಮನಾಳ ಗ್ರಾಮದ ಯಮನಪ್ಪ ನಾಟೀಕರ್ (19) ಮೃತರು.
ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಶವಗಳನ್ನು ಕಾರಿನಿಂದ ಹೊರಗೆ ತೆಗೆದು, ಮರಣೋತ್ತರ ಶಿಫ್ಟ್ ಮಾಡಲಾಗಿದೆ. ಉಮೇಶ್ ಭಜಂತ್ರಿ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
