Karnataka Band: ಮಹಾರಾಷ್ಟ್ರದಲ್ಲಿ ಕನ್ನಡಿಗರಿಗೆ ಹಾಗೂ ಕರ್ನಾಟಕ ಬಸ್ ಗಳು ಮತ್ತು ಸಿಬ್ಬಂದಿಗಳ ಮೇಲೆ ನಡೆಯುತ್ತಿರುವಂತಹ ನಿರಂತರ ದಬ್ಬಾಳಿಕೆಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು, ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಮಾರ್ಚ್ 22ರಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬಂದಿಗೆ ಕರೆ ನೀಡಲಾಗಿದೆ. ಈ ದಿನ ಶಾಲೆಗಳಿಗೆ ರಜೆ ಇರುತ್ತದೆಯ ಎಂಬುದು ಇದೀಗ ಹುಟ್ಟಿಕೊಂಡ ಪ್ರಶ್ನೆ. ಈ ಕುರಿತಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.
ಶಾಲಾ- ಕಾಲೇಜುಗಳಿಗೆ ರಜೆ ಇರುತ್ತಾ?
ಮಾರ್ಚ್ 22 ರಂದು ಕರ್ನಾಟಕ ಬಂದ್ ನಡೆಯಲಿದ್ದು, ಪೋಷಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲೆಗಳು ತೆರೆದಿರುತ್ತವೆಯೇ ಅಥವಾ ಆ ದಿನ ಮುಚ್ಚುತ್ತವೆಯೇ ಎಂದು ಯೋಜನೆಯಲ್ಲಿ ಇದ್ದಾರೆ. ಆದರೆ
ಶಾಲಾ-ಕಾಲೇಜುಗಳು ಓಪನ್ ಇರುತ್ತಾ? ಇಲ್ವಾ? ಎಂದು ಸ್ಷಷ್ಟನೆ ಇಲ್ಲ. ಇದೀಗ ಈ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಪ್ರತಿಕ್ರಿಯಿಸಿ 22ರಂದು ಕರ್ನಾಟಕ ಬಂದ್ (Karnataka Bandh) ಹಿನ್ನೆಲೆ ಶಾಲಾ-ಕಾಲೇಜುಗಳ ರಜೆ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ. ನಾಳೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಅಲ್ಲದೆ ಶನಿವಾರ ಎಸ್ಎಸ್ಎಲ್ಸಿ ಪರೀಕ್ಷೆ ಇಲ್ಲ. ಸಾರ್ವಜನಿಕ ವಾಹನ ಇಲ್ಲದೆ ಇದ್ದರೆ ಮಕ್ಕಳಿಗೆ ತೊಂದರೆ ಆಗುತ್ತೆ. ಗೃಹ ಇಲಾಖೆ ಜೊತೆ ಚರ್ಚೆ ನಡೆಸಿ ನಾಳೆ ತೀರ್ಮಾನ ಮಾಡುತ್ತೇವೆ. ಬಂದ್ಗೆ ಸಾರಿಗೆ ಬೆಂಬಲ ಕೊಟ್ಟರೆ ಮಕ್ಕಳಿಗೆ ತೊಂದರೆ ಆಗುತ್ತದೆ ಎಂದು ಹೇಳಿದ್ದಾರೆ.
