Home » Bengaluru: ಪಾಕಿಸ್ತಾನದ ಗೂಢಚಾರಿ ಬಂಧನ – ಈತ ಬೆಂಗಳೂರಿನ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಯ ಉದ್ಯೋಗಿ!!

Bengaluru: ಪಾಕಿಸ್ತಾನದ ಗೂಢಚಾರಿ ಬಂಧನ – ಈತ ಬೆಂಗಳೂರಿನ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಯ ಉದ್ಯೋಗಿ!!

0 comments

Bengaluru : ಬೆಂಗಳೂರಿನಲ್ಲಿ ಪಾಕಿಸ್ತಾನ ಗೂಡಾಚಾರಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಅಚ್ಚರಿಯೇನೆಂದರೆ ಈತ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಯ ಉದ್ಯೋಗಿ ಎಂಬುದು!!

 

ಸಿಲಿಕಾನ್ ಸಿಟಿಯಲ್ಲಿನ ಸರ್ಕಾರದ ಪ್ರತಿಷ್ಠಿತ ಬಿಇಎಲ್ (Bharat Electronics Limited) ​ನಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶದ ಮೂಲದ ದೀಪ್ ರಾಜ್ ಚಂದ್ರ ಎನ್ನುವ ಆರೋಪಿಯನ್ನು ಕೇಂದ್ರ ಗುಪ್ತಚರ ಇಲಾಖೆ, ರಾಜ್ಯ ಗುಪ್ತಚರ ಇಲಾಖೆ ಹಾಗೂ ಮಿಲಟರಿ ಇಂಟಲಿಜೆನ್ಸ್ ಜಂಟಿ‌ ಕಾರ್ಯಾಚರಣೆ ನಡೆಸಿ ಬಂಧಿಸಿವೆ.

 

ಯಾರಿಗೂ ಅನುಮಾನ ಬಾರದಂತೆ ದೇಶದ ಪ್ರತಿಷ್ಠಿತ ಸಂಸ್ಥೆಯಾದ ಬಿಇಎಲ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದನು. ಬಿಇಎಲ್​ನಲ್ಲಿನ ಮಹತ್ವದ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನೆ ಮಾಡುತ್ತಿದ್ದ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ಗುಪ್ತಚರ ಇಲಾಖೆ, ಮಿಲಟರಿ ಇಂಟಲಿಜೆನ್ಸ್ ಜಂಟಿ‌ ಕಾರ್ಯಾಚರಣೆ ನಡೆಸಿ ಬಂಧಿಸಿವೆ.

You may also like