Home » Phone trap: 2 ವರ್ಷದಿಂದ ನನ್ನ ಮತ್ತು ಕುಮಾರಸ್ವಾಮಿ ಫೋನ್‌ ಕದ್ದಾಲಿಕೆ: ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಅಶೋಕ್‌

Phone trap: 2 ವರ್ಷದಿಂದ ನನ್ನ ಮತ್ತು ಕುಮಾರಸ್ವಾಮಿ ಫೋನ್‌ ಕದ್ದಾಲಿಕೆ: ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಅಶೋಕ್‌

0 comments

Phone trap: “ನನ್ನ ಹಾಗೂ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ(H D Kumaraswamy) ಸೇರಿ ಹಲವರ ಪೋನ್ ಕದ್ದಾಲಿಕೆ ಮಾಡಲಾಗುತ್ತಿದೆ” ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್.ಅಶೋಕ್(R Ashok) ಆರೋಪ ಮಾಡಿದ್ದಾರೆ. “ಫೋನ್ ಕದ್ದಾಲಿಕೆ ಮಾಡುತ್ತಿರುವುದು ನೂರಕ್ಕೆ ನೂರರಷ್ಟು ನಿಜ. ಕಳೆದ ಎರಡು ವರ್ಷಗಳಿಂದ ಕುಮಾರಸ್ವಾಮಿ ಮತ್ತು ನನ್ನ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ” ಎಂದು ಅಶೋಕ್ ಹೇಳಿದರು. ಫೋನ್ ಕದ್ದಾಲಿಕೆಯನ್ನು ಕಾಂಗ್ರೆಸ್(Congress) ಶಾಸಕರೇ ಹೇಳಿದ್ದು, ವಿರೋಧಿಗಳನ್ನು ಬಗ್ಗುಬಡಿಯಲು ಹೀಗೆ ಮಾಡಲಾಗುತ್ತಿದೆ ಎಂದರು.

ಈಗಾಗಲೇ ಹನಿಟ್ರ್ಯಾಪ್ ಪ್ರಕರಣ ರಾಜ್ಯದಲ್ಲಿ ಭಾರಿ ಗದ್ದಲ ಎಬ್ಬಿಸುತ್ತಿದೆ. ಅದರ ಬೆನ್ನಲ್ಲೇ ಇದೀಗ ಫೋನ್‌ ಕದ್ದಾಲಿಕೆ ಮುನ್ನಲೆಗೆ ಬಂದಿದೆ. ರಾಜ್ಯದಲ್ಲಿ ಆಡಳಿತ ಮತ್ತು ಪ್ರತಿಪಕ್ಷ ನಾಯಕರ ಫೋನ್‌ ಕದ್ದಾಲಿಕೆ ಮಾಡಲಾಗುತ್ತಿದೆ. ಈ ವಿಚಾರವನ್ನು ಸ್ವತಃ ಆಡಳಿತ ಪಕ್ಷದ ಶಾಸಕರೇ ಹೇಳಿದ್ದಾರೆ. ವಿರೋಧಿಗಳನ್ನು ಬಗ್ಗು ಬಡಿಯಲು ಹೀಗೆ ಮಾಡಲಾಗುತ್ತಿದ್ದು, ಇದರಲ್ಲಿ ಅನುಮಾನವೇ ಬೇಡ ಎಂದು ವಿರೋಧ ಪಕ್ಷದ ನಾಯಕರು ಹೇಳಿದರು. ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಮತ್ತು ಅವರ ಪುತ್ರ ವಿಧಾನಪರಿಷತ್‌ ಸದಸ್ಯರೂ ಆದ ರಾಜೇಂದ್ರ ಅವರನ್ನು ಟ್ರ್ಯಾಕ್‌ ಮಾಡಲು ಈ ಅಸ್ತ್ರ ಪ್ರಯೋಗಿಸಲಾಗುತ್ತಿದೆ.

ಫೋನ್‌ ಕದ್ದಾಲಿಕೆ ಬಗ್ಗೆ ನಾನು ಮತ್ತು ಸಂಸದ ಎಚ್‌.ಡಿ. ಕುಮಾರಸ್ವಾಮಿ ಅವರು ಈ ಮೊದಲೇ ಆರೋಪ ಮಾಡಿದ್ದೆವು. ಆದರೆ ಈ ಬಗ್ಗೆ ಸರ್ಕಾರ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ.

You may also like