Rajat Kishan: ಬಿಗ್‌ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಮಾ.25 ರ ರಾತ್ರಿ ಕೋರಮಂಗಲದಲ್ಲಿರುವ 24 ನೇ ಎಸಿಜೆಎಂ ಜಡ್ಜ್ ನಿವಾಸಕ್ಕೆ ಪೊಲೀಸರು ಕರೆದುಕೊಂಡು ಹೋಗಿದ್ದು, ಇಬ್ಬರಿಗೂ ಒಂದು ದಿನ ನ್ಯಾಯಾಂಗ ಬಂಧನ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದರು.
ಮಚ್ಚು ಹಿಡಿದು ರೀಲ್ಸ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ವಿನಯ್ ಹಾಗೂ ರಜತ್ ನ್ಯಾಯಾಂಗ ಬಂಧನ ವಿಧಿಸಿದ ನಂತರ ಇವರಿಬ್ಬರನ್ನೂ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಇಂದು ಮಾ.26ರಂದು ಮತ್ತೆ ನ್ಯಾಯಾಲಯದ ಮುಂದೆ ಆರೋಪಿಗಳನ್ನು ಪೊಲೀಸರು ಹಾಜರುಪಡಿಸಲಿದ್ದಾರೆ. ಪೊಲೀಸರು ಈ ಸಂದರ್ಭದಲ್ಲಿ ಒಂದು ವಾರ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡಲಿದ್ದಾರೆ. ರೀಲ್ಸ್ ಮಾಡಲು ಬಳಸಿದ ಮಚ್ಚು ನಾಪತ್ತೆಯಾಗಿದೆ. ಈ ಕುರಿತು ವಿಚಾರಣೆ ಅಗತ್ಯವಿದೆ ಎಂದು ಪೊಲೀಸರು ನ್ಯಾಯಾಧೀಶರಿಗೆ ಮನವರಿಕೆ ಮಾಡುವ ಆಲೋಚನೆಯನ್ನು ಹೊಂದಿದ್ದಾರೆ.
