Home » IAS Coaching: ಐಎಎಸ್ ಮತ್ತು ಕೆಎಎಸ್ ಪರೀಕ್ಷೆಗಳಿಗೆ ತರಬೇತಿ

IAS Coaching: ಐಎಎಸ್ ಮತ್ತು ಕೆಎಎಸ್ ಪರೀಕ್ಷೆಗಳಿಗೆ ತರಬೇತಿ

0 comments

IAS Coaching: -ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ(Competitive exam) ತರಬೇತಿ ಕೇಂದ್ರದ ವತಿಯಿಂದ, ಕೇಂದ್ರ ಲೋಕ ಸೇವಾ ಆಯೋಗದವರು ನಡೆಸಲಿರುವ ಐಎಎಸ್(IAS) ಹಾಗೂ ಕರ್ನಾಟಕ ಲೋಕ ಸೇವಾ ಆಯೋಗದವರು ನಡೆಸಲಿರುವ ಕೆಎಎಸ್(KAS) ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ(Mysore) ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಆಸಕ್ತರು ಏಪ್ರಿಲ್, 02 ರೊಳಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ.

You may also like