7
Suicide: ತಾಯಿ ಸಾವಿನಿಂದ ಆಘಾತಕ್ಕೊಳಗಾಗಿದ್ದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
24 ವರ್ಷದ ರಕ್ಷಕ್ ಬಾಬು ಫುಡ್ ಡೆಲವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಸಾಲಬಾಧೆಗೆ ನೊಂದು ರಕ್ಷಕ್ ತಾಯಿ ಚಂದ್ರಿಕಾ ಒಂದುವರೆ ತಿಂಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದರು. ತಾಯಿ ಸಾವಿನ ಕೊರಗಲ್ಲೇ ಮಾನಸಿಕವಾಗಿ ನೊಂದಿದ್ದ ಯುವಕ ಈಗ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
